ರಿಷಬ್​ ಪಂತ್​ ನೋಡಲು ಗಣ್ಯರ ದಂಡು: ಅಸಮಾಧಾನ ಹೊರಹಾಕಿದ ಕುಟುಂಬಸ್ಥರು

ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಡಿಸೆಂಬರ್ 30 ರಂದು ಬೆಳಗಿನ ಜಾವ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಭಾರತದ ಕೀಪರ್-ಬ್ಯಾಟರ್ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ದಾಖಲಾದ ನಂತರ, ಅನೇಕ ಉನ್ನತ ಮಟ್ಟದ ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ. ಇದರಿಂದ ಪಂತ್‌ಗೆ ಅಗತ್ಯವಾದ ವಿಶ್ರಾಂತಿ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಪಂತ್ ಇನ್ನೂ ನೋವಿನಿಂದ ಬಳಲುತ್ತಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ಹಾರೈಸಲು ಹಲವರು ಭೇಟಿ ನೀಡುತ್ತಿದ್ದಾರೆ. ಆದರೆ ಇದರಿಂದ ಅವರಿಗೆ ಚೇತರಿಸಿಕೊಳ್ಳಲು ಆಗುತ್ತಿಲ್ಲ ಎನ್ನುವ ನೋವು ಕುಟುಂಬಸ್ಥರದ್ದು. ಈ ಕುರಿತು ವೈದ್ಯರ ಬಳಿ ಅವರು ಅಸಮಾಧಾನ ಹೊರಹಾಕಿದ್ದಾರೆ.

“ರಿಷಬ್ ಅವರು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ವಿಶ್ರಾಂತಿ ಪಡೆಯಲು ಸಾಕಷ್ಟು ಸಮಯವನ್ನು ಪಡೆಯುವುದು ಮುಖ್ಯವಾಗಿದೆ. ಅಪಘಾತದಲ್ಲಿ ಉಂಟಾದ ಗಾಯಗಳಿಂದಾಗಿ ಅವರು ಇನ್ನೂ ನೋವಿನಲ್ಲಿದ್ದಾರೆ. ಆದ್ದರಿಂದ ಅವರಿಗೆ ಸಂಪೂರ್ಣ ರೆಸ್ಟ್​ ಅವಶ್ಯಕತೆ ಇದೆ” ಎಂದು ವೈದ್ಯರು ಹೇಳುತ್ತಿದ್ದಾರೆ.

“ಆಸ್ಪತ್ರೆಯ ಭೇಟಿಯ ಸಮಯವು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಮತ್ತು ಸಂಜೆ 4 ರಿಂದ 5 ರವರೆಗೆ ಇರುತ್ತದೆ ಮತ್ತು ಯಾವುದೇ ಸಮಯದಲ್ಲಿ ಒಬ್ಬ ಸಂದರ್ಶಕರು ಮಾತ್ರ ರೋಗಿಯನ್ನು ಭೇಟಿ ಮಾಡಬಹುದು. ರಿಷಬ್ ಪಂತ್ ಅವರ ಪ್ರಕರಣವು ಉನ್ನತ ಪ್ರೊಫೈಲ್ ಆಗಿದೆ, ಇದರಿಂದಾಗಿ ಹೆಚ್ಚಿನ ಸಂದರ್ಶಕರು ಬರುತ್ತಿರುವುದರಿಂದ ತೊಂದರೆ ಆಗುತ್ತಿದೆ ಎಂದಿದ್ದಾರೆ.

ಬಾಲಿವುಡ್ ನಟರಾದ ಅನಿಲ್ ಕಪೂರ್ ಮತ್ತು ಅನುಪಮ್ ಖೇರ್, ಸಹ ಕ್ರಿಕೆಟಿಗ ನಿತೀಶ್ ರಾಣಾ, ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ನಿರ್ದೇಶಕ, ಶ್ಯಾಮ್ ಶರ್ಮಾ ಮತ್ತು ಕೆಲವು ಅಧಿಕಾರಿಗಳು ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಅನೇಕ ಉನ್ನತ ವ್ಯಕ್ತಿಗಳು ರಿಷಬ್ ಅವರನ್ನು ಆಸ್ಪತ್ರೆಗೆ ಭೇಟಿ ಮಾಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read