HomeKarnatakaBREAKING: ಹೃದಯ ವಿದ್ರಾವಕ ಘಟನೆ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮಹತ್ಯೆ

BREAKING: ಹೃದಯ ವಿದ್ರಾವಕ ಘಟನೆ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮಹತ್ಯೆ

ಗದಗ: ಮೂವರು ಮಕ್ಕಳ ಜೊತೆಗೆ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಸಮೀಪ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂವರು ಮಕ್ಕಳಾದ ವೇದಾಂತ್(3), ಪವನ್(4), ಧನ್ಯಾ(6) ಅವರೊಂದಿಗೆ ನದಿಗೆ ಹಾರಿ ಮಂಜುನಾಥ ಅರಕೇರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಮನನೊಂದ ಮಂಜುನಾಥ ಅರಕೇರಿ ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಸ್ಥಳೀಯರು ದೌಡಾಯಿಸಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular