HomeKarnatakaಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋದಾಗಲೇ ದುರಂತ: ನದಿಯಲ್ಲಿ ಮುಳುಗಿ ಇಬ್ಬರು ಸಾವು

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋದಾಗಲೇ ದುರಂತ: ನದಿಯಲ್ಲಿ ಮುಳುಗಿ ಇಬ್ಬರು ಸಾವು

ಉಡುಪಿ: ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ನೆಲ್ಲಿಕಟ್ಟೆ ಕ್ರಾಸ್ ಬಳಿ ಸೀತಾ ನದಿಯಲ್ಲಿ ಸ್ನಾನ ಮಾಡಲು ಇಳಿದ ಯುವಕರಿಬ್ಬರು ಮೃತಪಟ್ಟಿದ್ದಾರೆ.

ಯುವಕರಿಗೆ ಈಜು ಬಾರದ ಕಾರಣ ಮುಳುಗಿ ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದೆ. ಶಿವಮೊಗ್ಗ ಮೂಲದ ದೀಪಕ್(34), ಸೀನು ಡೇನಿಯಲ್(40) ಮೃತಪಟ್ಟವರು ಎಂದು ಹೇಳಲಾಗಿದೆ. ದೀಪಕ್ ಶೃಂಗೇರಿಯಲ್ಲಿ ವೈದ್ಯರಾಗಿದ್ದು, ಸೀನು ಡೇನಿಯಲ್ ಶಿವಮೊಗ್ಗದ ಟೈಯರ್ ರಿಸೋಲ್ ಸೆಂಟರ್ ನಲ್ಲಿ ಉದ್ಯೋಗಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಈಜಲು ನದಿಗೆ ಇಳಿದಾಗ ಘಟನೆ ನಡೆದಿದೆ. ಹೆಬ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular