HomeKarnatakaಕುಟುಂಬದವರೊಂದಿಗೆ ನದಿ ಬಳಿ ಬಂದಾಗಲೇ ಘೋರ ದುರಂತ: ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

ಕುಟುಂಬದವರೊಂದಿಗೆ ನದಿ ಬಳಿ ಬಂದಾಗಲೇ ಘೋರ ದುರಂತ: ಇಬ್ಬರು ವಿದ್ಯಾರ್ಥಿಗಳು ನೀರು ಪಾಲು

ಹೊಸಪೇಟೆ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದ್ಯಾಳ್ ಗ್ರಾಮದ ಸಮೀಪ ತುಂಗಾಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.

ವಿದ್ಯಾರ್ಥಿಗಳಾದ ತೌಸೀಫ್(15), ಸಮೀರ್(14) ಮೃತಪಟ್ಟವರು ಎಂದು ಹೇಳಲಾಗಿದೆ. ಕುಟುಂಬದವರೊಂದಿಗೆ ತುಂಗಾಭದ್ರಾ ನದಿ ಬಳಿ ಬಾಲಕರು ಬಂದಿದ್ದು, ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ.

ತೌಸೀಫ್ ಪರಪನಹಳ್ಳಿ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ಓದುತ್ತಿದ್ದು, ಸಮೀರ್ ನ್ಯಾಷನಲ್ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಮೃತ ಬಾಲಕರು ಹರಪನಹಳ್ಳಿ ಪಟ್ಟಣದ ಶಿಲಾರಗೇರಿ ನಿವಾಸಿಗಳಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular