ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ನಿಂದನೆ ಹಾಗೂ ಜೀವಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ನಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಬ್ಯಾನರ್ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕರೆ ಮಾಡಿ ನಿಂದಿಸಿದ್ದಲ್ಲದೇ, ಜೀವ ಬೆದರಿಕೆ ಹಾಕಿದ್ದರು. ರಾಜೀವ್ ಗೌಡ, ಪೌರಾಯುಕ್ತಗೆ ಬೆದರಿಕೆ ಹಾಕಿದ್ದ ಆಡೀಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪೌರಾಯುಕ್ತೆ ರಾಜೀವ್ ಗೌಡ ವಿರುದ್ಧ ದೂರು ನೀಡಿದ್ದು, ರಾಜೀವ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಲ್ಲಿರುವ ರಾಜೀವ್ ಗೌಡ ತಲೆಮರೆಸಿಕೊಂಡಿದ್ದಾರೆ.
ಈನಡುವೆ ರಾಜೀವ್ ಗೌಡಗೆ ಕಾಂಗ್ರೆಸ್ ಕೂಡ ಬಿಗ್ ಶಾಕ್ ನೀಡಿದೆ. ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಶಿಫಾರಸಿನ ಮೇರೆಗೆ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ನಿಂದ ಅಮಾನತು ಮಾಡಿ ಆದೇಶ ಹೊರಡಿಸಲಾದೆ.
ಮತ್ತೊಂದೆಡೆ ರಾಜೀವ್ ಗೌಡ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಬೆನ್ನಲ್ಲೇ ರಾಜೀವ್ ಗೌಡನನ್ನು ಬಂಧಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜೀವ್ ಗೌಡ ಬಂಧನಕ್ಕಾಗಿ ಪೊಲೀಸರ ನಾಲ್ಕು ವಿಶೇಷ ತಂಡ ಕಾರ್ಯಾಚರಣೆ ನಡೆಸಿದೆ. ಬೆಂಗಳೂರು, ಕೋಲಾರ, ತಮಿಳುನಾಡಿನಲ್ಲಿ ರಾಜೀವ್ ಗೌಡಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕರೆ ಮಾಡಿ ನಿಂದಿಸಿದ ಹಾಗೂ ಜೀವಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಪೌರಾಯುಕ್ತೆಗೆ ನಿಂದಿಸಿದ ಹಾಗೂ ಬೆದರಿಕೆಯೊಡ್ಡಿರುವ ಆಡಿಯೋ ಕೂಡ ವೈರಲ್ ಆಗಿತ್ತು.

