ನವದೆಹಲಿ: ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ.
ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಮತ್ತು ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಕಳೆದ ತಿಂಗಳು ಕೇಂದ್ರ ಸರ್ಕಾರ ಭಾರತ ರತ್ನ ಘೋಷಿಸಿದೆ. ಒಂದು ತಿಂಗಳ ಅವಧಿಯಲ್ಲಿ ಸರ್ಕಾರ ಇದುವರೆಗೆ 5 ಭಾರತ ರತ್ನ ಪ್ರಶಸ್ತಿಗಳನ್ನು ಘೋಷಿಸಿದೆ.
ಪ್ರಧಾನಿ ಮೋದಿಯವರ ಘೋಷಣೆಯ ಕೆಲವೇ ನಿಮಿಷಗಳಲ್ಲಿ, ಆರ್‌ಎಲ್‌ಡಿ ಮುಖ್ಯಸ್ಥ ಮತ್ತು ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಮೊಮ್ಮಗ ಜಯಂತ್ ಸಿಂಗ್ ಚೌಧರಿ ಅವರು “ದಿಲ್ ಜೀತ್ ಲಿಯಾ” (ಹೃದಯ ಗೆದ್ದಿದ್ದಾರೆ) ಎಂದು ಟ್ವೀಟ್ ಮಾಡಿದ್ದಾರೆ.
ಆರ್‌ಜೆಡಿ ಬಿಜೆಪಿ ಸೇರಲಿದೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ಅವರು, ಬಿಜೆಪಿ ಬೇಡ ಎಂದು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.
ನೀವು ಬಿಜೆಪಿ-ಎನ್‌ಡಿಎ ಜೊತೆ ಕೈಜೋಡಿಸಲು ಸಿದ್ಧರಿದ್ದೀರಾ ಎಂಬ ಪ್ರಶ್ನೆಗೆ ಜಯಂತ್ ಚೌಧರಿ, ಇಂದು ದೇಶಕ್ಕೆ ದೊಡ್ಡ ದಿನ ಮತ್ತು ನನಗೆ ಭಾವನಾತ್ಮಕ ಕ್ಷಣವಾಗಿದೆ. ನಾನು ರಾಷ್ಟ್ರಪತಿ, ಭಾರತ ಸರ್ಕಾರ ಮತ್ತು ವಿಶೇಷವಾಗಿ ಪ್ರಧಾನಿ ಮೋದಿಗೆ ಧನ್ಯವಾದ ಹೇಳುತ್ತೇನೆ ಎಂದು ಹೇಳಿದ್ದಾರೆ.
https://twitter.com/i/status/1755881252354200022

 
			 
		 
		 
		 
		 Loading ...
 Loading ... 
		 
		 
		