HomeKarnatakaBIG NEWS: ರಸ್ತೆ ದಾಟುತ್ತಿದ್ದ ವೇಳೆ ಭೀಕರ ಅಪಘಾತ: ಕಾರು ಡಿಕ್ಕಿಯಾದ ರಭಸಕ್ಕೆ ಹಾರಿ ಬಿದ್ದ...

BIG NEWS: ರಸ್ತೆ ದಾಟುತ್ತಿದ್ದ ವೇಳೆ ಭೀಕರ ಅಪಘಾತ: ಕಾರು ಡಿಕ್ಕಿಯಾದ ರಭಸಕ್ಕೆ ಹಾರಿ ಬಿದ್ದ ಬಾಲಕ

ಬೀದರ್: ರಸ್ತೆ ದಾಟುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪತಿಣಾಮ ಬಾಲಕ ಹಾರಿಬಿದ್ದು ಗಂಭೀರ ಸ್ಥಿತಿ ತಲುಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ.

ಔರಾದ್ ತಾಲೂಕಿನ ಜಿರಗಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ವಿಕಾಸ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಬಾಲಕ. ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದ ವಿಕಾಸ್, ಹೆದ್ದಾರಿ ದಾಟಿ ಪಕ್ಕದ ರಸ್ತೆಗೆ ಹೋಗುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಬಾಲಕನ ಸ್ಥಿತಿ ಗಂಭಿರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಖಂಡಿಸಿ ಸ್ಥಳೀಯರು ಹಾಗೂ ಬಾಲಕನ ಕುಟುಂಬದವರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಅಪಘಾತದ ನಿಯಂತ್ರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular