HomeLatest NewsBREAKING: ರಸ್ತೆಗುಂಡಿ ತಪ್ಪಿಸಲು ಹೋಗಿ ಪಲ್ಟಿಯಾದ ಕಾರು: ಐವರು ಗಂಭೀರ ಗಾಯ

BREAKING: ರಸ್ತೆಗುಂಡಿ ತಪ್ಪಿಸಲು ಹೋಗಿ ಪಲ್ಟಿಯಾದ ಕಾರು: ಐವರು ಗಂಭೀರ ಗಾಯ

ನೆಲಮಂಗಲ: ರಸ್ತೆಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿ ಬಿದ್ದಿರುವ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೆಂಗಳೂರು ಹೊರವಲಯದ ನೆಲಮಂಗಲದ ಕುಣಿಗಲ್ ಬೈಪಾಸ್ ಫ್ಲೈಓವರ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ. ಘಟನ ಅಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular