ನಾಳೆ ರಾಜ್ಯಕ್ಕೆ ಅಮಿತ್ ಶಾ: ತೇಜಸ್ವಿ ಸೂರ್ಯ ಪರ ಭರ್ಜರಿ ಪ್ರಚಾರ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದು, ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಈ ಮೊದಲು ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ ಎಂದು ಹೇಳಲಾಗಿತ್ತು. ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆ ಮಾಡಲಾಗಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಏಪ್ರಿಲ್ 23ರಂದು ಸಂಜೆ 7 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು 7:30ಕ್ಕೆ ಬೊಮ್ಮನಹಳ್ಳಿ ಸರ್ಕಲ್ ನಿಂದ ಐಐಎಂಬಿ, ಬನ್ನೇರುಘಟ್ಟ ರಸ್ತೆ, ಬಿಳೇಕಹಳ್ಳಿವರೆಗೂ ರೋಡ್ ಶೋ ನಡೆಸಲಿದ್ದಾರೆ. ರಾತ್ರಿ 8.30 ರವರೆಗೆ ಪ್ರಚಾರ ನಡೆಸಲಿದ್ದು, ನಂತರ ಹೆಚ್ಎಎಲ್ ಗೆ ತೆರಳಿ ಅಲ್ಲಿಂದ ಕೇರಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read