ಮೇ 6 ರಂದು ಒಂದೇ ದಿನ ಪ್ರಧಾನಿ ಮೋದಿ 28 ಕಿ.ಮೀ. ಮೆಗಾ ರೋಡ್ ಶೋ: 23 ಕ್ಷೇತ್ರಗಳಲ್ಲಿ ಮಿಂಚಿನ ಸಂಚಾರ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕೈಗೊಂಡಿರುವ ಪ್ರಧಾನಿ ಮೋದಿ ಮೇ 6 ರಂದು ಮೆಗಾ ರೋಡ್ ಶೋ ಹಮ್ಮಿಕೊಂಡಿದ್ದಾರೆ. ಎರಡು ದಿನ ಬದಲಾಗಿ ಒಂದೇ ದಿನ ಬೃಹತ್ ರೋಡ್ ಶೋ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ ಮತ್ತು ಸಂಜೆ ಪ್ರಧಾನಿ ರೋಡ್ ಶೋ ನಡೆಸಲಿದ್ದಾರೆ. ಬೆಳಗ್ಗೆ 8 ಕಿಮೀ, ಸಂಜೆ 28 ಕಿಲೋಮೀಟರ್ ಬೃಹತ್ ರೋಡ್ ಶೋ ಗೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಬೆಳಗ್ಗೆ ಸಿವಿ ರಾಮನ್ ನಗರದಿಂದ ರೋಡ್ ಶೋ ಆರಂಭವಾಗಲಿದ್ದು, ಬ್ರಿಗೇಡ್ ರೋಡ್ ನಲ್ಲಿ ಅಂತ್ಯವಾಗುವ ಸಾಧ್ಯತೆ ಇದೆ.

ಮೇ 6 ರಂದು ಸಂಜೆ ಕೋಣನಕುಂಟೆಯಿಂದ ರೋಡ್ ಶೋ ಆರಂಭವಾಗಲಿದೆ. ಜಯನಗರ, ಗಾಂಧಿ ಬಜಾರ್, ಶಾಂತಿನಗರ, ಬಿನ್ನಿ ಮಿಲ್, ಮಾಗಡಿ ರಸ್ತೆ, ಟೋಲ್ ಗೇಟ್, ದಾಸರಹಳ್ಳಿ, ಹೌಸಿಂಗ್ ಬೋರ್ಡ್, ಬಸವೇಶ್ವರನಗರ, ನವರಂಗ್, ಮಲ್ಲೇಶ್ವರಂ, ಸಂಪಿಗೆ ರಸ್ತೆ, ಸರ್ಕಲ್ ಮಾರಮ್ಮ ದೇವಾಲಯದವರಿಗೆ ರೋಡ್ ಶೋ ನಡೆಯಲಿದೆ.

ಬೆಂಗಳೂರಿನಲ್ಲಿ ಒಟ್ಟು 23 ಕ್ಷೇತ್ರಗಳನ್ನು ಒಳಗೊಳ್ಳುವಂತೆ ಮೇ 6 ರಂದು ಪ್ರಧಾನಿ ಮೋದಿ ಮೆಗಾ ರೋಡ್ ಶೋ ಗೆ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read