HomeKarnatakaರಸ್ತೆಗಳಲ್ಲಿ ದೇಗುಲ, ಮಸೀದಿ, ಚರ್ಚ್ ನಿರ್ಮಿಸಿದರೆ ಜನಸಾಮಾನ್ಯರು ಏನು ಮಾಡಬೇಕು: ಹೈಕೋರ್ಟ್ ಆಕ್ರೋಶ

ರಸ್ತೆಗಳಲ್ಲಿ ದೇಗುಲ, ಮಸೀದಿ, ಚರ್ಚ್ ನಿರ್ಮಿಸಿದರೆ ಜನಸಾಮಾನ್ಯರು ಏನು ಮಾಡಬೇಕು: ಹೈಕೋರ್ಟ್ ಆಕ್ರೋಶ

ಬೆಂಗಳೂರು: ಸಾರ್ವಜನಿಕರ ರಸ್ತೆಗಳಲ್ಲಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸುತ್ತ ಹೋದರೆ ಜನಸಾಮಾನ್ಯರು ಏನು ಮಾಡಬೇಕು ಎಂದು ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರಿನ ಸುಂಕದಕಟ್ಟೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ದೇವಾಲಯ ನಿರ್ಮಾಣ ಮಾಡಲಾಗಿದೆ ಎಂದು ಸುಂಕದಕಟ್ಟೆ ಗಜಾನನ ನಗರದ ಸಿ. ಹೊನ್ನಯ್ಯ ಸೇರಿ ನಾಲ್ವರು ಸಲ್ಲಿಸಿದ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯ ಪೀಠ ವಿಚಾರಣೆ ನಡೆಸಿ ಮೌಖಿಕವಾಗಿ ಆಕ್ರೋಶ ವ್ಯಕ್ತಪಡಿಸಿದೆ. ವಿವಾದಿತ ಸ್ಥಳ ಸರ್ವೆ ನಡೆಸಿ ಮೂರು ವಾರಗಳಲ್ಲಿ ವಸ್ತುನಿಷ್ಠ ವರದಿ ಸಲ್ಲಿಸುವಂತೆ ಬೆಂಗಳೂರು ಜಿಲ್ಲಾಧಿಕಾರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸರ್ಕಾರಿ ರಸ್ತೆ ಒತ್ತುವರಿ ಮಾಡಿ ದೇವಾಲಯ ನಿರ್ಮಿಸುತ್ತಿದ್ದಾರೆ. ಸಾರ್ವಜನಿಕರ ಓಡಾಟಕ್ಕೆ ಇದ್ದ ರಸ್ತೆ ನಿರ್ಬಂಧಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗ ನ್ಯಾಯಪೀಠ, ಸಾರ್ವಜನಿಕರ ರಸ್ತೆ ಒತ್ತುವರಿ ಮಾಡಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸಿದರೆ ಜನ ಏನು ಮಾಡಬೇಕು. ಇದನ್ನು ನ್ಯಾಯಪೀಠ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular