HomeKarnatakaರಸ್ತೆ ಕಾಮಗಾರಿ ವೇಳೆ ದೂಳು ಬರುತ್ತೆ ಎಂದು ಗಲಾಟೆ: ಕಾರ್ಮಿಕರ ಮೇಲೆ ಕಲ್ಲು ತೂರಾಟ; NHAI...

ರಸ್ತೆ ಕಾಮಗಾರಿ ವೇಳೆ ದೂಳು ಬರುತ್ತೆ ಎಂದು ಗಲಾಟೆ: ಕಾರ್ಮಿಕರ ಮೇಲೆ ಕಲ್ಲು ತೂರಾಟ; NHAI ವಾಹನ ಜಖಂ ಗೊಳಿಸಿದ ದುಷ್ಕರ್ಮಿಗಳು

ಮಂಗಳೂರು: ರಸ್ತೆ ಕಾಮಗಾರಿ ವೇಳೆ ದೂಳು ಬರುತ್ತಿದೆ ಎಂದು ಗಲಾಟೆ ನಡೆಸಿ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನ ಕೈಕಂಬ ಬಳಿ ನಡೆದಿದೆ.

ದೂಳು ಬರುತ್ತೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ತುರ್ತು ಸೇವೆ ವಾಹನವನ್ನು ಜಖಂಗೊಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಮಗಾರಿ ನಡೆಯುತ್ತಿತ್ತು. ವಿಪರೀತ ದೂಳು ಬರುತ್ತಿದೆ ಎಂದು ದುಷ್ಕರ್ಮಿಗಳು 20ಕ್ಕೂ ಹೆಚ್ಚು ಕಾರ್ಮಿಕರ ಮೇಲೆ ಕಲ್ಲು ತೂರಾಟ ನಡೆಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಾಹನವನ್ನೂ ಜಖಂಗೊಳಿಸಿದ್ದಾರೆ. ಬಂಟ್ವಾಳ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular