ಥಾಣೆ: ಭಾನುವಾರ (ಮೇ 7) ನಸುಕಿನ ವೇಳೆ ಮಹಾರಾಷ್ಟ್ರದ ಥಾಣೆಯ ವಾಗ್ಲೆ ಎಸ್ಟೇಟ್ ಪ್ರದೇಶದಲ್ಲಿ ಎಟಿಎಂ ದರೋಡೆಗೆ ಯತ್ನಿಸಿದ ಪ್ರಕರಣ ವರದಿಯಾಗಿದೆ.
ಜಿ ಎಸ್ ಟಿ ಭವನದ ರಸ್ತೆಯಲ್ಲಿರುವ ಆಕ್ಸಿಸ್ ಬ್ಯಾಂಕ್‌ನ ಎಟಿಎಂನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಎಟಿಎಂ ಯಂತ್ರವನ್ನು ದರೋಡೆ ಮಾಡಲು ಪ್ರಯತ್ನಿಸುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.
ವ್ಯಕ್ತಿ ಕೃತ್ಯ ಎಸಗುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ದಾಖಲಾಗಿದ್ದು, ಪ್ರಕರಣದ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮಾಹಿತಿ ಪಡೆದ ಕೆಲವೇ ನಿಮಿಷಗಳಲ್ಲಿ ಸ್ಥಳೀಯ ಪೊಲೀಸರು ಧಾವಿಸಿ ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸ್ ತಂಡವು ಅಪರಾಧದ ಬಗ್ಗೆ ತಿಳಿದ ನಾಲ್ಕೈದು ನಿಮಿಷಗಳಲ್ಲೇ ಆರೋಪಿಯನ್ನು ಬಂಧಿಸಿದೆ. ಆರೋಪಿ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
https://twitter.com/fpjindia/status/1655434704609476608?ref_src=twsrc%5Etfw%7Ctwcamp%5Etweetembed%7Ctwterm%5E1655434704609476608%7Ctwgr%5Effff4ca94521f477f85bf01161acaa30e2fd547a%7Ctwcon%5Es1_&ref_url=https%3A%2F%2Fwww.freepressjournal.in%2Fmumbai%2Fwatch-robber-breaks-into-thane-banks-atm-caught-by-cops-within-minutes