ಬಳ್ಳಾರಿ: ಅಂತರಾಜ್ಯ ದರೋಡೆಕೋರನ ಮೇಲೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಬರೋಬ್ಬರಿ 13 ಎಟಿಎಂ ಕಳ್ಳತನ ಪ್ರಕರಣದಲ್ಲಿ ಹಾಗೂ ಎರಡು ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಕುಖ್ಯಾತ ಡಕಾಯಿತ ಅಮರೇಶ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗುಂಡೇಟು ತಗುಲಿ ಗಾಯಗೊಂಡಿರುವ ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನೆ.
ಆರೋಪಿ ಅಮರೇಶ್ ವಿರುದ್ಧ ಒಟ್ಟು 30 ಪ್ರಕರಣಗಳಿವೆ ಎಂದು ತಿಳಿದುಬಂದಿದೆ. ಕರ್ನಾಟಕ ಹಾಗೂ ಆಂಧ್ರ ಎರಡೂ ರಾಜ್ಯಗಳಲ್ಲಿಯೂ ದರೋಡೆ, ಕೊಲೆ ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಲ್ಲದೇ 13 ಎಟಿಎಂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಪ್ರಕರಣವೊಂದರಲ್ಲಿ ಬಂಧಿಸಿ ಸ್ಥಳ ಮಹಜರಿಗೆ ಕರೆತಂದಿದ್ದ ವೇಳೆ ಆರೋಪಿ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.
ಈ ವೇಳೆ ಸಿರಗುಪ್ಪ ಸಿಪಿಐ ಹನುಮಂತಪ್ಪ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ನಿರ್ಲಕ್ಷ್ಯ ಮಡಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ. ಘಟನೆಯಲ್ಲಿ ಪೊಲೀಸ್ ಪೇದೆ ವಿರೂಪಾಕ್ಷ ಗೌಡ ಹಾಗೂ ಮಾರುತಿ ಎಂಬುವವರಿಗೆಗೂ ಗಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.