HomeLive NewsBREAKING: ಹುಣಸೂರಿನಲ್ಲಿ ಹಾಡಹಗಲೇ ಚಿನ್ನಾಭರಣ ಮಳಿಗೆಗೆ ನುಗ್ಗಿದ ದರೋಡೆಕೋರರ ಗ್ಯಾಂಗ್: ಗನ್ ತೋರಿಸಿ ಚಿನ್ನಾಭರಣ ಲೂಟಿ...

BREAKING: ಹುಣಸೂರಿನಲ್ಲಿ ಹಾಡಹಗಲೇ ಚಿನ್ನಾಭರಣ ಮಳಿಗೆಗೆ ನುಗ್ಗಿದ ದರೋಡೆಕೋರರ ಗ್ಯಾಂಗ್: ಗನ್ ತೋರಿಸಿ ಚಿನ್ನಾಭರಣ ಲೂಟಿ ಮಾಡಿ ಎಸ್ಕೇಪ್

ಮೈಸೂರು: ರಾಜ್ಯದಲ್ಲಿ ಹಾಡಹಗಲೇ ಮತ್ತೊಂದು ದರೋಡೆ ನಡೆದಿದೆ. ಚಿನ್ನಾಭರಣ ಮಳಿಗೆಗೆ ನುಗ್ಗಿದ ದರೋಡೆಕೋರರ ಗ್ಯಾಂಗ್ ಗನ್ ತೋರಿಸಿ ಅಪಾರ ಪ್ರಮಾಣದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ಮೈಸೂರುರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಹುಣಸೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಸ್ಕೈ ಗೋಲ್ಡ್ ಆಂಡ್ ಡೈಮಂಡ್ ಚಿನ್ನಾಭರಣ ಮಳಿಗೆಯಲ್ಲಿ ಈ ಘಟನೆ ನಡೆದಿದೆ. ಹಗಲು ಹೊತ್ತಿನಲ್ಲಿಯೇ ರಾಜರೋಷವಾಗಿ ಮುಸುಕುಧಾರಿಗಳ ಗ್ಯಾಂಗ್ ವೊಂದು ಚಿನ್ನಾಭರಣ ಅಂಗಡಿಗೆ ನುಗ್ಗಿದೆ. ಏಕಾಏಕಿ ಸಿಬ್ಬಂದಿಗಳಿಗೆ ಗನ್ ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದೆ. ಬಳಿಕ ದರೋಡೆಕೋರರು ಚಿನ್ನಾಭರಣಗಳನ್ನು ಲೂಟಿ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಲಕ್ಷ ಲಕ್ಷ ಚಿನ್ನಾಭರಣ ಕದ್ದು ಎಸ್ಕೇಪ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಹಾಡಹಗಲೇ ಚಿನ್ನಾಭರಣ ಮಳಿಗೆ ಲೂಟಿ ಮಾಡಿರುವ ಘಟನೆ ಮೈಸೂರು ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ವಿಷಯ ತಿಳಿಯುತ್ತಿದ್ದಂತೆ ಹುಣಸೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular