HomeLatest NewsBREAKING: ರಾಜ್ಯದಲ್ಲಿ ಮತ್ತೊಂದು ದರೋಡೆ: ಚಿನ್ನಾಭರಣ ಮಳಿಗೆಗೆ ನುಗ್ಗಿ ಗನ್ ತೋರಿಸಿ ಅಪಾರಪ್ರಮಾಣದ ಚಿನ್ನಾಭರಣ...

BREAKING: ರಾಜ್ಯದಲ್ಲಿ ಮತ್ತೊಂದು ದರೋಡೆ: ಚಿನ್ನಾಭರಣ ಮಳಿಗೆಗೆ ನುಗ್ಗಿ ಗನ್ ತೋರಿಸಿ ಅಪಾರಪ್ರಮಾಣದ ಚಿನ್ನಾಭರಣ ಕದ್ದೊಯ್ದ ಐವರ ಗ್ಯಾಂಗ್

ಮೈಸೂರು: ರಾಜ್ಯದಲ್ಲಿ ಸಾಲು ಸಾಲು ದರೋಡೆ ಪ್ರಕರಣಗಳು ನಡೆಯುತ್ತಿವೆ. ಚಿನ್ನಾಭರಣ ಮಳಿಗೆಗೆ ನುಗ್ಗಿದ ದರೋಡೆಕೋರರ ಗ್ಯಾಂಗ್ ಅಪಾರ ಪ್ರಮಾಣದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.

ಹುಣಸೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಬಳಿ ಇರುವ ಸ್ಕೈ ಗೋಲ್ಡ್ ಆಂಡ್ ಡೈಮಂಡ್ ಚಿನ್ನಾಭರಣ ಮಳಿಗೆಗೆ ನುಗ್ಗಿದ ಐವರು ದರೋಡೆಕೋರರ ಗ್ಯಾಂಗ್, ಸಿಬ್ಬಂದಿಗಳಿಗೆ ಗನ್ ತೋರಿಸಿ, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಅಪಾರಪ್ರಮಾಣದ ಚಿನಾಭರಣಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಹಾಡಹಗಲೇ ಐವರು ಮುಸುಕುಧಾರಿಗಳು ಜಿಲ್ಲಾಭರಣ ಮಳಿಗೆಗೆ ನುಗ್ಗಿ ಈ ಕೃತ್ಯವೆಸಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಹುಣಸೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular