ಗದಗ: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ನಟೋರಿಯಸ್ ದರೋಡೆಕೋರನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಮತ್ತು ಡೋಣಿ ಗ್ರಾಮದಲ್ಲಿ ನಡೆದಿದೆ.
ಜಯಸಿಂಹ ಮೊಡಕೇರ್ ಎಂಬ ದರೋಡೆಕೋರನನ್ನು ಲಕ್ಷ್ಮೀಶ್ವರ ಪೊಲೀಸ್ ಠಾಣೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಜಯಸಿಂಹನ ಕಾಲಿಗೆ ಗುಂಡೇಟು ಹೊಡೆದು ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಗಾಯಾಳು ದರೋಡೆಕೋರನನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಗಳ್ಳತನ, ದರೋಡೆ ಸೇರಿದಂತೆ ಹಲವು ಪ್ರಕರನಗಳಲ್ಲಿ ಆರೋಪಿ ಭಾಗಿಯಾಗಿದ್ದ. ನಿನ್ನೆ ವಿಜಯನಗರ ಬಳಿ ಜಯಸಿಂಹನನ್ನು ಪೊಲೀಸರು ಬಂಧಿಸಿದ್ದರು.