ನನಗೂ ಕಂಪನಿಗಳಿಗೂ ಸಂಬಂಧವಿಲ್ಲ: ಪಿಎಫ್ ವಂಚನೆ ಪ್ರಕರಣ ಬಗ್ಗೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸ್ಪಷ್ಟನೆ

ಬೆಂಗಳೂರು: ಕಾರ್ಮಿಕರಿಂದ ಕಡಿತಗೊಳಿಸಿದ್ದ ಪಿಎಫ್ ಹಣವನ್ನು ಸರ್ಕಾರಕ್ಕೆ ಜಮೆ ಮಾಡದೇ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸ್ಪಷ್ಟನೆ ನೀಡಿದ್ದಾರೆ.

ಬಂಧನ ವಾರಂಟ್ ಜಾರಿಯಾದ ಬೆನ್ನಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಕಂಪನಿಗಳಿಗೆ ಕೆಲವು ವರ್ಷಗಳ ಹಿಂದೆಯೇ ರಾಜೀನಾಮೆ ನೀಡಿದ್ದೇನೆ. ಇದರಲ್ಲಿ ನನ್ನ ಪಾತ್ರವಿಲ್ಲ, ಕಂಪನಿಗಳ ಜೊತೆಗೆ ನನಗೆ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ಹಣಕಾಸಿನ ನೆರವಿನ ಕಾರಣಕ್ಕೆ 2018 -19ರಲ್ಲಿ ನಿರ್ದೇಶಕನಾಗಿ ನೇಮಕವಾಗಿದ್ದೆ. ಆದರೆ ಕಾರ್ಯನಿರ್ವಾಹಕನಾಗಿರಲಿಲ್ಲ. ಕಂಪನಿಯ ದೈನಂದಿನ ವ್ಯವಹಾರದಲ್ಲಿ ನನಗೆ ಯಾವುದೇ ಸಂಬಂಧವಿಲ್ಲ. ಈ ಕಂಪನಿಗಳು ನಾನು ಸಾಲದ ರೂಪದಲ್ಲಿ ನೀಡಿದ ಹಣ ಮರುಪಾವತಿಸುವ ವಿಫಲವಾಗಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆ. ಕಂಪನಿಯ ನಿರ್ದೇಶಕ ಹುದ್ದೆಗೆ ಕೆಲವು ವರ್ಷಗಳ ಹಿಂದೆಯೇ ನಾನು ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read