‘ಕಾಂತಾರ ಚಾಪ್ಟರ್-1’ ಸಿನಿಮಾ ನೋಡಿ ಹಾಡಿ ಹೊಗಳಿದ ರಾಕಿಂಗ್ ಸ್ಟಾರ್ ಯಶ್.!


ಬೆಂಗಳೂರು : ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ ಚಾಪ್ಟರ್ 1’ ಚಿತ್ರ ವಿಶ್ವದಾದ್ಯಂತ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರ ನೋಡಿ ಹಲವು ನಟ, ನಟಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ನಟ ರಾಕಿಂಗ್ ಸ್ಟಾರ್ ಯಶ್ ಕೂಡ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
.

ಟ್ವೀಟ್ ಮಾಡಿರುವ ನಟ ಯಶ್ ‘’ ಕಾಂತಾರ ಅಧ್ಯಾಯ 1: ಕನ್ನಡ ಮತ್ತು ಭಾರತೀಯ ಸಿನಿಮಾಕ್ಕೆ ಹೊಸ ಮಾನದಂಡ. @shetty_rishab, ನಿಮ್ಮ ದೃಢನಿಶ್ಚಯ, ಮತ್ತು ಸಂಪೂರ್ಣ ಭಕ್ತಿ ಪ್ರತಿ ಫ್ರೇಮ್ನಲ್ಲೂ ಸ್ಪಷ್ಟವಾಗಿ ಗೋಚರಿಸುತ್ತದೆ. ಬರಹಗಾರ, ನಿರ್ದೇಶಕ ಮತ್ತು ನಟನಾಗಿ, ನಿಮ್ಮ ದೃಷ್ಟಿಕೋನವು ಪರದೆಯ ಮೇಲೆ ನಿಜವಾಗಿಯೂ ತಲ್ಲೀನಗೊಳಿಸುವ ಅನುಭವವಾಗಿ ಬದಲಾಗುತ್ತದೆ. @VKiragandur ಸರ್ ಮತ್ತು @hombalefilms ಗೆ ಹೃತ್ಪೂರ್ವಕ ಅಭಿನಂದನೆಗಳು. ಮಹತ್ವಾಕಾಂಕ್ಷೆಯ ಯೋಜನೆಗಳಿಗೆ ನಿಮ್ಮ ದೃಷ್ಟಿಕೋನ ಮತ್ತು ಬೇಷರತ್ತಾದ ಬೆಂಬಲವು ನಿರಂತರವಾಗಿ ಉದ್ಯಮದ ಮಟ್ಟವನ್ನು ಹೆಚ್ಚಿಸುತ್ತಿದೆ. @rukminitweets ಮತ್ತು @gulshandevaiah, ನೀವು ಅದ್ಭುತ, ಶಕ್ತಿಶಾಲಿ ಪ್ರದರ್ಶನಗಳನ್ನು ನೀಡಿದ್ದೀರಿ. @AJANEESHB, ನಿಮ್ಮ ಸಂಗೀತವು ಆ ಫ್ರೇಮ್ಗಳಿಗೆ ಜೀವ ತುಂಬುತ್ತದೆ. ಅರವಿಂದ್ ಕಶ್ಯಪ್, ನಿಮ್ಮ ಅದ್ಭುತ ಕ್ಯಾಮೆರಾ ಕೆಲಸವು ಆ ಜಗತ್ತಿಗೆ ಜೀವ ತುಂಬಿತು. ಜಯರಾಮ್, ಪ್ರಮೋದ್ ಶೆಟ್ಟಿ, ಪ್ರಕಾಶ್ ಥುಮಿನಾಡ್ ಮತ್ತು ಇಡೀ ಪಾತ್ರವರ್ಗ ಮತ್ತು ಸಿಬ್ಬಂದಿಯ ಅತ್ಯುತ್ತಮ ಕೆಲಸ. ಈ ಚಿತ್ರಕ್ಕೆ ರಾಕೇಶ್ ಪೂಜಾರಿ ನೀಡಿದ ಹಗುರ ಕ್ಷಣಗಳು ಈಗ ಅವರ ಪ್ರತಿಭೆಗೆ ಸೂಕ್ತವಾದ ಗೌರವವಾಗಿದೆ. ನೀವೆಲ್ಲರೂ ಒಟ್ಟಾಗಿ ಅದ್ಭುತ ಸಿನಿಮಾವನ್ನು ರಚಿಸಿದ್ದೀರಿ! ಎಂದು ಯಶ್ ಟ್ವೀಟ್ ಮಾಡಿದ್ದಾರೆ.

ಈ ಸಿನಿಮಾ ಬಿಡುಗಡೆ ಆದ ಮೊದಲ ದಿನವೇ ಭಾರತದಲ್ಲಿ 45 ಕೋಟಿ ರೂ., ವಿದೇಶಗಳಲ್ಲಿ 10 ಕೋಟಿ ರೂ. ಗಳಿಸಿದ್ದು, ಇಂದು 100 ಕೋಟಿ ಕ್ಲಬ್ ಗೆ ಸೇರುವ ಸಾಧ್ಯತೆ ಇದೆ. ಪ್ರೀಮಿಯರ್ ಶೋಗಳು ಮತ್ತು ಮೊದಲ ದಿನದ ಗಳಿಕೆಯಿಂದ 55 ಕೋಟಿ ರೂ. ಗಳಿಸಿರುವುದು ಹೊಸ ದಾಖಲೆಯಾಗಿದೆ.ಭಾರತದಲ್ಲಿ ಒಟ್ಟು 6500 ಸ್ಕ್ರೀನ್ ಗಳಲ್ಲಿ ಸುಮಾರು 12, 511ಕ್ಕೂ ಹೆಚ್ಚು ಶೋಗಳು ಪ್ರದರ್ಶನ ಕಂಡಿವೆ. ಎಲ್ಲಾ ಭಾಷೆಗಳು ಸೇರಿ ಭಾರತದಲ್ಲಿ ಅಂದಾಜು 45 ಕೋಟಿ ರೂಪಾಯಿ ಗಳಿಸಿದ್ದು, ಶುಕ್ರವಾರದ ವೇಳೆಗೆ ಸಿನಿಮಾ 100 ಕೋಟಿ ಕ್ಲಬ್ ಸೇರುವ ಸಾಧ್ಯತೆ ಇದೆ.
ದೇಶಾದ್ಯಂತ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲಿ, ದೇಶಾದ್ಯಂತ ಪ್ರೇಕ್ಷಕರು ಫಿದಾ ಆಗಿದ್ದಾರೆ. ಅಮೆರಿಕ ಸೇರಿದಂತೆ 30 ದೇಶಗಳಲ್ಲಿ ಸಿನಿಮಾ ಬಿಡುಗಡೆಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read