HomeEntertainment'ಟಾಕ್ಸಿಕ್' ಚಿತ್ರದಲ್ಲಿ ಲಾಯರ್ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್

‘ಟಾಕ್ಸಿಕ್’ ಚಿತ್ರದಲ್ಲಿ ಲಾಯರ್ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್

ನಟ ರಾಕಿಂಗ್ ಸ್ಟಾರ್ ಯಶ್ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದಲ್ಲಿ ವಕೀಲರಾಗಿ ಮಿಂಚಲಿದ್ದಾರೆ. ‘ಟಾಕ್ಸಿಕ್’ ಚಿತ್ರದ ಹೊಸ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯಶ್ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಯಶ್ ಅವರ ಲಾಯರ್ ಲುಕ್ ನೋಡಿದ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರದ ಪ್ರಚಾರ ಶೂಟಿಂಗ್ ವೇಳೆಯಲ್ಲಿ ನಟ ಯಶ್ ಲಾಯರ್ ಪಾತ್ರಧಾರಿಯಾಗಿ ಕಾಣಿಸಿಕೊಂಡಿದ್ದಾರೆ. ಕೆವಿಎನ್ ಪ್ರೊಡಕ್ಷನ್ ಬ್ಯಾನರ್ ನಡಿ ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಕರ್ನಾಟಕ ಮಾತ್ರವಲ್ಲದೆ ವಿವಿಧೆಡೆ ‘ಟಾಕ್ಸಿಕ್’ ಚಿತ್ರೀಕರಣ ನಡೆದಿದೆ. ‘ಕೆಜಿಎಫ್ -2’ ಬಳಿಕ ಬರುತ್ತಿರುವ ‘ಟಾಕ್ಸಿಕ್’ ಕುರಿತಾದ ಕುತೂಹಲ ಭಾರಿ ಹೆಚ್ಚಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular