ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಪ್ರಿಯರ ಗಮನ ಸೆಳೆದಿದೆ.
ಪೃಥ್ವಿ ಅಂಬಾರ್ ಹಾಗೂ ಕಾವ್ಯ ಶೈವ ನಾಯಕ-ನಾಯಕಿಯಾಗಿ ತೆರೆ ಹಂಚಿಕೊಂಡಿದ್ದು, ಚಿತ್ರವನ್ನು ಪುಷ್ಪಾ ಅರುಣ್ ಕುಮಾರ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಆಗಸ್ಟ್ 1 ರಂದು ಸಿನಿಮಾ ತೆರೆಗೆ ಬರಲಿದ್ದು, ಸದ್ಯ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.
ಪಕ್ಕಾ ಹಳ್ಳಿ ಸೊಗಡಿನ ಸಿನಿಮಾ ಇದು ಎಂದು ಹೇಳಲಾಗಿದ್ದು, ಸಿನಿಮಾದ ಹಿನ್ನೆಲೆ ಸಂಗೀತ, ಕ್ಯಾಮೆರಾ ವರ್ಕ್, ಮೇಕಿಂಗ್ ಎಲ್ಲಾವೂ ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಿದೆ.