ಧರ್ಮಸ್ಥಳ : ಟಾಕ್ಸಿಕ್ ಸಿನಿಮಾದ ಶೂಟಿಂಗ್ ಬ್ಯುಸಿಯಾಗಿರುವ ನಟ ರಾಕಿಂಗ್ ಸ್ಟಾರ್ ಯಶ್ ಕೊಂಚ ಬಿಡುವು ಮಾಡಿಕೊಂಡು ತಮ್ಮ ಕುಟುಂಬದರ ಜೊತೆ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ನಟ ಯಶ್ ಅವರು ತಮ್ಮ ಪತ್ನಿ ರಾಧಿಕಾ ಪಂಡಿತ್ ಹಾಗೂ ಇಬ್ಬರು ಮಕ್ಕಳ ಜೊತೆ ಧರ್ಮಸ್ಥಳಕ್ಕೆ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ.
ಮಂಜುನಾಥ ಸ್ವಾಮಿ ದರ್ಶನ ಪಡೆದ ಬಳಿಕ ನಟ ಯಶ್ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ. ಮಲಯಾಳ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್ ದಾಸ್ ಟಾಕ್ಸಿಕ್ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಡ್ರಗ್ ಮಾಫಿಯಾದ ಸುತ್ತಾ ಚಿತ್ರದ ಕಥೆ ಹೆಣೆಯಲಾಗಿದೆ. 2025 ರಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ತೆರೆಗೆ ಬರಲಿದೆ.
https://twitter.com/FanpageofYash/status/1816399780651708667?ref_src=twsrc%5Etfw%7Ctwcamp%5Etweetembed%7Ctwterm%5E1816399780651708667%7Ctwgr%5E3b814f1297fbc2ae9c9ac2a0708c2637756d95a8%7Ctwcon%5Es1_&ref_url=https%3A%2F%2Fvistaranews.com%2Fcinema-film%2Factor-yash-temple-run-visited-dharmasthala%2F709691.html