HomeLatest NewsBREAKING : ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಚಿತ್ರ ಬಿಡುಗಡೆ ದಿನಾಂಕ ಜೂ. 4ಕ್ಕೆ...

BREAKING : ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರ ಬಿಡುಗಡೆ ದಿನಾಂಕ ಜೂ. 4ಕ್ಕೆ ಮುಂದೂಡಿಕೆ.!


ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಿಗ್ ಬಜೆಟ್ ಸಿನಿಮಾ ‘ಟಾಕ್ಸಿಕ್’ (Toxic) ಇರಾನ್-ಇಸ್ರೇಲ್ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಈ ಮೊದಲು ಮಾರ್ಚ್ 19 ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರವು, ಈಗ ಜೂನ್ 4 ರಂದು ವಿಶ್ವದಾದ್ಯಂತ ತೆರೆಕಾಣಲಿದೆ.

ಹೌದು. ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿರುವ ‘ಟಾಕ್ಸಿಕ್’ ಚಿತ್ರದ ಬಿಡುಗಡೆಯನ್ನು ಅಧಿಕೃತವಾಗಿ ಮುಂದೂಡಲಾಗಿದ್ದು, ಜೂನ್ 4 ರಂದು ಹೊಸ ಜಾಗತಿಕ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ಇಸ್ರೇಲ್-ಇರಾನ್ ಯುದ್ಧದ ಪರಿಸ್ಥಿತಿಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಚಿತ್ರತಂಡ ತಿಳಿಸಿದೆ. ನಟ ಯಶ್ ಮತ್ತು ‘ಟಾಕ್ಸಿಕ್’ ತಂಡವು ಅಧಿಕೃತ ಪೋಸ್ಟ್ ಮೂಲಕ ಈ ಬದಲಾವಣೆಯನ್ನು ಖಚಿತಪಡಿಸಿದ್ದಾರೆ.

‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಎಂಬ ಹೆಸರಿನ ಈ ಗ್ಯಾಂಗ್ ಸ್ಟರ್ ಚಿತ್ರವನ್ನು ಗೀತು ಮೋಹನ್ ದಾಸ್ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರಂತಹ ಘಟಾನುಘಟಿ ತಾರಾಗಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಜೆಟ್ ಮತ್ತು ನಿರ್ಮಾಣ: ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ಮತ್ತು ಯಶ್ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾ ಸುಮಾರು ₹600-700 ಕೋಟಿ ಬಜೆಟ್ ನಲ್ಲಿ ತಯಾರಾಗುತ್ತಿದ್ದು, ಇದು ಭಾರತದ ಅತ್ಯಂತ ದುಬಾರಿ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

‘ತಬಾಹಿ’ ಹಾಡಿನ ಹವಾ: ಈ ನಡುವೆ, ಚಿತ್ರತಂಡವು ಮಾರ್ಚ್ 2 ರಂದು ‘ತಬಾಹಿ’ ಎಂಬ ಮೊದಲ ಹಾಡನ್ನು ಜೀ ಮ್ಯೂಸಿಕ್ ಕಂಪನಿಯ ಮೂಲಕ ಬಿಡುಗಡೆ ಮಾಡಿದೆ. ವಿಶಾಲ್ ಮಿಶ್ರಾ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿನಲ್ಲಿ ಯಶ್ ಮತ್ತು ಕಿಯಾರಾ ಅಡ್ವಾಣಿ ಅವರ ತೀವ್ರವಾದ ಪ್ರಣಯದ ದೃಶ್ಯಗಳಿವೆ. ಯೋಗರಾಜ್ ಭಟ್ ಅವರ ಸಾಹಿತ್ಯವಿರುವ ಈ ಹಾಡು ಈಗಾಗಲೇ ಪ್ರೇಕ್ಷಕರ ಮನಗೆದ್ದಿದೆ.ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ಹೆಚ್ಚುತ್ತಿರುವ ಯುದ್ಧದ ಉದ್ವಿಗ್ನತೆಯಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿತ್ರದ ಬಿಡುಗಡೆಗೆ ತೊಂದರೆಯಾಗಬಹುದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

View this post on Instagram

A post shared by Yash (@thenameisyash)

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular