HomeIndiaಟಿ20 ವಿಶ್ವಕಪ್: ರೋಹಿತ್ ಭರ್ಜರಿ ಬ್ಯಾಟಿಂಗ್: ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತ ಸೆಮಿಫೈನಲ್ ಗೆ ಎಂಟ್ರಿ

ಟಿ20 ವಿಶ್ವಕಪ್: ರೋಹಿತ್ ಭರ್ಜರಿ ಬ್ಯಾಟಿಂಗ್: ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತ ಸೆಮಿಫೈನಲ್ ಗೆ ಎಂಟ್ರಿ

ಸೇಂಟ್ ಲೂಸಿಯಾ: ಆಸ್ಟ್ರೇಲಿಯಾ ವಿರುದ್ಧ 24 ರನ್‌ಗಳ ಜಯದೊಂದಿಗೆ ಅಜೇಯ ತಂಡವಾಗಿ ಭಾರತ ಟಿ20 ವಿಶ್ವಕಪ್ ಸೆಮಿಫೈನಲ್‌ ಪ್ರವೇಶಿಸಿದೆ.

ಸೋಮವಾರ ಸೇಂಟ್ ಲೂಸಿಯಾದ ಡೇರೆನ್ ಸಮ್ಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸಮಗ್ರ ಗೆಲುವು ಸಾಧಿಸುವ ಮೂಲಕ 2024 ರ ಐಸಿಸಿ ಪುರುಷರ T20 ವಿಶ್ವಕಪ್‌ನ ಸೆಮಿಫೈನಲ್‌ಗೆ ಭಾರತ ಪ್ರವೇಶಿಸಿತು. ನಾಯಕ ರೋಹಿತ್ ಶರ್ಮಾ ಅವರ ಬಿರುಸಿನ ಆಟ ತಂಡದ ಗೆಲುವಿಗೆ ನೆರವಾಯಿತು.

ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ರೋಹಿತ್ ಶರ್ಮ 92, ಸೂರ್ಯ ಕುಮಾರ್ ಯಾದವ್ 31, ಶಿವಂ ದುಬೆ 28, ಹಾರ್ದಿಕ್ ಪಾಂಡ್ಯ ಅಜೇಯ 27 ರನ್ ಗಳಿಸಿದರು. ಆಸ್ಟ್ರೇಲಿಯಾ ಪರವಾಗಿ ವಿಚಲ್ ಸ್ಟಾರ್ಕ್ 2,  ಮಾರ್ಕಸ್ಟೋನಿಯಸ್ 2 ವಿಕೆಟ್ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

206 ರನ್ ಗೆಲುವಿನ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು. ಟ್ರಾವಿಸ್ ಹೆಡ್ 76, ಮಿಚೆಲ್ ಮಾರ್ಷ್ 37, ಗ್ಲೆನ್ ಮ್ಯಾಕ್ಸ್ವೆಲ್ 22 ರನ್ ಗಳಿಸಿದರು. ಭಾರತದ ಪರವಾಗಿ ಅರ್ಷದೀಪ್ ಸಿಂಗ್ 3 ಕುಲದೀಪ್ ಯಾದವ್ 2 ವಿಕೆಟ್ ಪಡೆದರು. ಭಾರತ ಆಸ್ಟ್ರೇಲಿಯಾವನ್ನು 181/7 ಗೆ ಸೀಮಿತಗೊಳಿಸಿ 24 ರನ್‌ಗಳಿಂದ ಜಯಗಳಿಸಿದ್ದು, ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ಎದುರಿಸಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular