ಟ್ರಕ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 4 ಮಂದಿ ಬಲಿ

ಬುಂಡಿ: ರಾಜಸ್ಥಾನದ ಬುಂದಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಟ್ರಕ್‌ ಗೆ ಕಾರ್ ಡಿಕ್ಕಿ ಹೊಡೆದು ಮಧ್ಯಪ್ರದೇಶದ ಕುಟುಂಬ ದುರಂತ ಅಂತ್ಯ ಕಂಡಿದೆ.

ಕುಟುಂಬ ಸಮೇತರಾಗಿ ಪುಷ್ಕರ್‌ ಗೆ ತೆರಳುತ್ತಿದ್ದ ವೇಳೆ ಹಿಂದೋಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಸಂತ್ರಸ್ತರನ್ನು ಮಧ್ಯಪ್ರದೇಶದ ಅಗರ್-ಮಾಲ್ವಾ ಜಿಲ್ಲೆಯ ಗಂಗೂಖೇಡಿ ಗ್ರಾಮದವರಾದ ದೇವಿ ಸಿಂಗ್(50), ಅವರ ಪತ್ನಿ ಮಾಂಖೋರ್ ಕನ್ವರ್(45), ಅವರ ಸಹೋದರ ರಾಜಾರಾಂ(40), ಮತ್ತು ಅವರ ಸೋದರಳಿಯ ಜಿತೇಂದ್ರ(20) ಎಂದು ಗುರುತಿಸಲಾಗಿದೆ.

ಹಿಂದೋಳಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ ಪೆಕ್ಟರ್ ಮನೋಜ್ ಸಿಕರ್ವಾಲ್ ಪ್ರಕಾರ, ಸರಿಸುಮಾರು 12:30 ರ ಸುಮಾರಿಗೆ ಕುಟುಂಬವನ್ನು ಹೊತ್ತೊಯ್ಯುತ್ತಿದ್ದ ಎಸ್‌ಯುವಿ ಹಿಂದೋಳಿ ಪಟ್ಟಣದ ಬಳಿ ಹಿಂಬದಿಯಿಂದ ಹೆವಿ ಡ್ಯೂಟಿ ಟ್ರಕ್‌ ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. SUV ಹೆಚ್ಚಿನ ವೇಗದಲ್ಲಿ ಚಲಿಸುತ್ತಿತ್ತು ಎಂದು ತೋರುತ್ತಿದೆ, ಮುಂದೆ ಇದ್ದ ಟ್ರಕ್ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಕಾರ್ ಡಿಕ್ಕಿಯಾಗಿದೆ.

ಮೂವರು ವ್ಯಕ್ತಿಗಳು ಘಟನಾ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವೇಳೆ ಭಾನುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಟ್ರಕ್ ಚಾಲಕ ತನ್ನ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ.

ಮೃತರ ಶವಗಳನ್ನು ಶವಾಗಾರದಲ್ಲಿ ಇರಿಸಲಾಗಿದ್ದು, ಕುಟುಂಬ ಸದಸ್ಯರು ಆಗಮಿಸಿದ ನಂತರ ಮರಣೋತ್ತರ ಪರೀಕ್ಷೆಯನ್ನು ದಿನದ ನಂತರ ನಡೆಸಲು ನಿರ್ಧರಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read