ಮೊದಲ ಏಕದಿನ ಪಂದ್ಯದಿಂದ ರೋಹಿತ್ ಶರ್ಮಾ ಹೊರಕ್ಕೆ: ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಟೆಸ್ಟ್, ಏಕದಿನ ಪಂದ್ಯಗಳಿಗೆ ಭಾರತ ತಂಡ

ಬಿಸಿಸಿಐ ಏಕದಿನ ಸರಣಿ ಮತ್ತು ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಟೆಸ್ಟ್‌ ಗಳಿಗೆ ಭಾರತ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಕಳೆದುಕೊಳ್ಳಲಿದ್ದಾರೆ.

ಅವರ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಕೌಟುಂಬಿಕ ಕಾರಣದಿಂದಾಗಿ ಶ್ರೀ ರೋಹಿತ್ ಶರ್ಮಾ ಮೊದಲ ಏಕದಿನ ಪಂದ್ಯಕ್ಕೆ ಅಲಭ್ಯರಾಗುತ್ತಾರೆ ಮತ್ತು ಶ್ರೀ ಹಾರ್ದಿಕ್ ಪಾಂಡ್ಯ ಮೊದಲ ODI ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಭಾರತ ಏಕದಿನ ತಂಡ

ರೋಹಿತ್ ಶರ್ಮಾ(ಸಿ), ಎಸ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ವಿಸಿ), ಆರ್ ಜಡೇಜಾ, ಕುಲದೀಪ್ ಯಾದವ್, ಡಬ್ಲ್ಯು ಸುಂದರ್, ವೈ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ , ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಜಯದೇವ್ ಉನದ್ಕತ್.

3ನೇ ಮತ್ತು 4ನೇ ಟೆಸ್ಟ್‌ ಗೆ ಭಾರತ ತಂಡ

ರೋಹಿತ್ ಶರ್ಮಾ(ಸಿ), ಕೆಎಲ್ ರಾಹುಲ್, ಎಸ್. ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್, ಇಶಾನ್ ಕಿಶನ್, ಆರ್ ಅಶ್ವಿನ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಆರ್ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನದ್ಕತ್.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read