HomeKarnatakaರಥೋತ್ಸವದ ವೇಳೆಯಲ್ಲೇ ನಡೆದಿದೆ ನಡೆಯಬಾರದ ಘಟನೆ: ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವು

ರಥೋತ್ಸವದ ವೇಳೆಯಲ್ಲೇ ನಡೆದಿದೆ ನಡೆಯಬಾರದ ಘಟನೆ: ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವು

ಗದಗ: ರಥೋತ್ಸವದ ವೇಳೆಯಲ್ಲಿ ರಥದ ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ.

ವೀರಭದ್ರೇಶ್ವರ ರಥೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವನ್ನಪ್ಪಿದ್ದಾರೆ. ರಾಜ ಬೀದಿಯಲ್ಲಿ ರಥ ಎಳೆಯುವಾಗ ಆಯತಪ್ಪಿ ಕೆಳಗೆ ಬಿದ್ದ ಇಬ್ಬರ ಮೇಲೆ ರಥ ಹರಿದಿದೆ. ಮೃತರಲ್ಲಿ ಒಬ್ಬರನ್ನು ಮಲ್ಲಪ್ಪ ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular