HomeKarnatakaಶಿವಮೊಗ್ಗದಲ್ಲಿ ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ, ಪರಿಶೀಲನೆ

ಶಿವಮೊಗ್ಗದಲ್ಲಿ ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ, ಪರಿಶೀಲನೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಜಿಲ್ಲಾ ಪೊಲೀಸರು ರೌಡಿಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು, ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ.

ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆಯ ಭಾಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಕೈಗೊಳ್ಳಲಾಗುತ್ತಿರುವ, ಸುರಕ್ಷತಾ ಹಾಗೂ ಮುಂಜಾಗ್ರತಾ ಕ್ರಮಗಳ ಭಾಗವಾಗಿ ಇಂದು ಬೆಳಗಿನ ಜಾವ ರೌಡಿ ಆಸಾಮಿಗಳ ಮನೆಗಳ ಮೇಲೆ ದಾಳಿ ನಡೆಸಿ, ರೌಡಿ ಆಸಾಮಿಗಳ ಹಾಜರಾತಿ, ಮಾರಕಾಸ್ತ್ರಗಳು, ಮಾದಕ ವಸ್ತು ಗಾಂಜಾ, ಅವರುಗಳ ಚಟುವಟಿಕೆ ಹಾಗೂ ನ್ಯಾಯಾಲಯದ ವಾರೆಂಟ್ ಗಳ ಬಗ್ಗೆ ಪರಿಶೀಲಿಸಿ, ಉತ್ತಮ ನಡತೆ ಹೊಂದಿರುವಂತೆ ಹಾಗೂ ಯಾವುದೇ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿದರೆ ಕಾನೂನು ರೀತ್ಯಾ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿರುತ್ತದೆ.

ಗಣೇಶ ವಿಸರ್ಜನೆ: ಕಟ್ಟುನಿಟ್ಟಿನ ನಿಯಮ ಜಾರಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ: ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು ಹಾಗೂ ಸಾರ್ವಜನಿಕ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ದಿನಾಂಕ 14-09-2026 ರಿಂದ ಆರಂಭವಾಗುವ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹೊಳೆ, ನದಿ, ಕೆರೆ ಹಾಗೂ ಹಿನ್ನೀರು ಪ್ರದೇಶಗಳಲ್ಲಿ ತೆಪ್ಪದ ಮೂಲಕ ಮೂರ್ತಿ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಕಡ್ಡಾಯವಾಗಿದೆ. ಈ ಹಿಂದೆ ಶಿವಮೊಗ್ಗ ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ತೆಪ್ಪ ಮುಳುಗಿ 12 ಜನರು ಸಾವನ್ನಪ್ಪಿದ್ದ ದುರಂತ ಘಟನೆಯನ್ನು ಗಮನದಲ್ಲಿಟ್ಟುಕೊಂಡು, ಅಂತಹ ಅನಾಹುತಗಳು ಮರುಕಳಿಸದಂತೆ ತಡೆಯಲು ಈ ಸುರಕ್ಷತಾ ಮಾರ್ಗಸೂಚಿಗಳನ್ನು ವಿಧಿಸಲಾಗಿದೆ.

ಪ್ರಮುಖ ನಿಯಮಗಳು ಹಾಗೂ ನಿರ್ದೇಶನಗಳು:

ತೆಪ್ಪದ ಮೂಲಕ ವಿಸರ್ಜನೆ ಮಾಡುವಾಗ ತೆಪ್ಪದಲ್ಲಿ ಕೇವಲ 2 ರಿಂದ 3 ಜನರಿಗೆ ಮಾತ್ರ ಹೋಗಲು ಅವಕಾಶವಿರುತ್ತದೆ.

ಲೈಫ್ ಜ್ಯಾಕೆಟ್ ಕಡ್ಡಾಯ: ತೆಪ್ಪದಲ್ಲಿ ತೆರಳುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಲೈಫ್ ಜ್ಯಾಕೆಟ್  ಧರಿಸಿರಬೇಕು.ನುರಿತ ಈಜುಗಾರರ ಸಮಕ್ಷಮದಲ್ಲೇ ಗಣಪತಿ ಮೂರ್ತಿ ವಿಸರ್ಜನೆ ಪ್ರಕ್ರಿಯೆಯನ್ನು ನಡೆಸತಕ್ಕದ್ದು.

ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 35 ಮತ್ತು 36ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸ್ಸಿನ ಮೇರೆಗೆ ಜಿಲ್ಲೆಯಾದ್ಯಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಗಳು ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಬೈಕ್ ರ‍್ಯಾಲಿ ನಿಷೇಧ

ಶಿವಮೊಗ್ಗ: ಜಿಲ್ಲೆಯಲ್ಲಿ ಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ದಿ:14/09/2026 ರಿಂದ ದಿ:13/10/2026 ರವರೆಗೆ 30 ದಿನಗಳ ಕಾಲ ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದುಗಳನ್ನು ಸಿಡಿಸುವುದನ್ನು ಮತ್ತು ಬೈಕ್ ರ‍್ಯಾಲಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಸೆ.14 ರಂದು ಜಿಲ್ಲಾದ್ಯಂತ ಗಣೇಶ ಹಬ್ಬ ನಡೆಯಲಿದ್ದು, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆಗಳಿರುತ್ತವೆ.

ಈ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರ ಶಿಫಾರಸಿನಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಕಲಂ 35, 36 ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲಾದ್ಯಂತ ಸೆ. 14 ರಿಂದ ಅ.13 ರವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular