ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ -1 ಆರೋಪಿ ಜಗದೀಶ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.
ಪ್ರಕರಣ ಜಾಮೀನು ನೀಡಲು ಅರ್ಹವಲ್ಲ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಎ -1 ಆರೋಪಿ ಜಗದೀಶ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸುಪಾರಿ ಪಡೆದಿದ್ದ ನಾಲ್ವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದರು. ಆದರೆ ಇದುವರೆಗೆ ಕೂಡ ಪ್ರಮುಖ ಆರೋಪಿ ಬಂಧನವಾಗಿಲ್ಲ. ರೌಡಿಶೀಟರ್ ಬಿಕ್ಲು ಶಿವ ಕೊಲೆ ಮಾಡಲು ಗ್ಯಾಂಗ್ ಒಂದೂವರೆ ಲಕ್ಷ ಹಣ ಸುಪಾರಿ ಪಡೆದಿತ್ತು ಎನ್ನಲಾಗಿದೆ. ನರಸಿಂಹ ಎಂಬಾತನ ಗ್ಯಾಂಗ್ ಕೊಲೆ ಮಾಡಲು ಸುಪಾರಿ ಪಡೆದಿದ್ದಿತ್ತು.
ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದ್ದು, ಬೈರತಿ ಬಸವರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಭಾರತಿನಗರ ಠಾಣೆಯಲ್ಲಿ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾಜಿ ಸಚಿವ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ. ಜಗದೀಶ್ ಎ1, ಕಿರಣ್ ಎ2, ವಿಮಲ್ ಎ 3, ಅನಿಲ್ ಎ4 ರೋಪಿಗಳಾಗಿದ್ದಾರೆ.
ಕಿತ್ತನೂರು ಜಾಗದ ವಿಚಾರವಾಗಿ ರೌಡಿಶೀಟರ್ ಶಿವಪ್ರಕಾಶ್ ಕೊಲೆ ಮಾಡಲಾಗಿದೆ. ಬಿಳಿಬಣ್ಣದ ಸ್ಕಾರ್ಪಿಯೋದಲ್ಲಿ 8-9 ಜನರು ಬಂದು ಶಿವಪ್ರಕಾಶ್ ಗೆ ಬೆದರಿಕೆ ಹಾಕಿದ್ದರು. ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ತಾಯಿ ವಿಜಯಲಕ್ಷ್ಮೀ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.