HomeCrimeBREAKING: ಪ್ರೇಯಸಿ ಜೊತೆ ಹೋಗುತ್ತಿದ್ದಾಗಲೇ ಅಡ್ಡಗಟ್ಟಿ ರೌಡಿಶೀಟರ್ ಬರ್ಬರ ಹತ್ಯೆ

BREAKING: ಪ್ರೇಯಸಿ ಜೊತೆ ಹೋಗುತ್ತಿದ್ದಾಗಲೇ ಅಡ್ಡಗಟ್ಟಿ ರೌಡಿಶೀಟರ್ ಬರ್ಬರ ಹತ್ಯೆ

ಕೋಲಾರ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಮಾರಿಕುಪ್ಪಂ ಸಮೀಪ ಘಟನೆ ನಡೆದಿದೆ.

ಶಿವಕುಮಾರ್ ಅಲಿಯಾಸ್ ತೇನ್ ಕೊಲೆಯಾದ ರೌಡಿಶೀಟರ್ ಎಂದು ಗುರುತಿಸಲಾಗಿದೆ. ಮಾರಿಕುಪ್ಪಂ ರಿವೀಟರ್ಸ್ ಲೈನ್ ನಿವಾಸಿಯಾಗಿರುವ ಶಿವಕುಮಾರ್ ನನ್ನು ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಪ್ರಿಯತಮೆಯ ಜೊತೆಗೆ ಕಾಮಸಮುದ್ರಕ್ಕೆ ಹೋಗುವಾಗ ಅಡ್ಡಗಟ್ಟಿ ಕೊಲೆ ಮಾಡಲಾಗಿದೆ.

ಎರಡು ಬೈಕ್ ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ. ರೌಡಿಶೀಟರ್ ಜೊತೆಗಿದ್ದ ಪ್ರಿಯತಮೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಲೆಯಾದ ಶಿವಕುಮಾರ್ ಆಂಡರ್ಸನ್ ಪೇಟೆ ಠಾಣೆಯ ರೌಡಿಶೀಟರ್ ಆಗಿದ್ದಾನೆ. ಶಿವಕುಮಾರ್ ವಿರುದ್ಧ 3 ಕೊಲೆ ಯತ್ನ, ಹಲ್ಲೆ ಪ್ರಕರಣಗಳು ಇವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಲೆಗೈದು ಪರಾರಿಯಾಗಿರುವ ಹಂತಕರಿಗೆ ಪೊಲೀಸರು ಬಲೆ ಬೀಸಿದ್ದಾರೆ. ಅಂಡರ್ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular