
ಇನ್ನೋವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ನಡುರಸ್ತೆಯಲ್ಲೇ ಅಟ್ಟಾಡಿಸಿ ರೌಡಿಶೀಟರ್ ಮಾಸ್ತಿಗೌಡ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಂದಿದ್ದಾರೆ. ಹೊನ್ನಮಾರನಹಳ್ಳಿಯ ರೌಡಿಶೀಟರ್ ಮಾಸ್ತಿಗೌಡನನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಕೊಂದಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹಾಡಹಗಲೇ ನಡೆದ ಭೀಕರ ಕೊಲೆಗೆ ಜನರು ಬೆಚ್ಚಿ ಬಿದ್ದಿದ್ದಾರೆ.
ಅಪ್ರಾಪ್ತನಿಂದ ಆಘಾತಕಾರಿ ಕೃತ್ಯ: ಆಟವಾಡುವ ವೇಳೆ ಚಾಕುವಿನಿಂದ ಇರಿದು ಹತ್ಯೆ
ಮೈಸೂರು: ಮೈಸೂರಿನಲ್ಲಿ ಅಪ್ರಾಪ್ತರ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಅಪ್ರಾಪ್ತ ಮತ್ತೊಬ್ಬ ಅಪ್ರಾಪ್ತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಮೈಸೂರು ನಗರದ ಸುನ್ನಿ ಚೌಕ ಬಳಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು 17 ವರ್ಷದ ಫರ್ವೆಜ್ ಖಾನ್ ನನ್ನು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ 15 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಟವಾಡುವ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿ ಇಂತಹ ಕೃತ್ಯವೆಸಗಿದ್ದಾನೆ. ಮೈಸೂರಿನ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

