HomeLatest Newsರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್: ನಾಲ್ವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್: ನಾಲ್ವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ.

ಎ2 ಕಿರಣ್, ಎ3 ವಿಮಲ್ ರಾಜ್, ಎ6 ಪ್ರದೀಪ್, ಎ7 ಆರ್. ಮದನ್ ಅವರು ಸಲ್ಲಿಸಿದ ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ.

ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮಿನಿ ಅವೆನ್ಯೂ ರಸ್ತೆಯಲ್ಲಿ 2025 ಜುಲೈ 15ರಂದು 8 ರಿಂದ 10 ಜನರ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಕ್ಲು ಶಿವನನ್ನು ಕೊಲೆ ಮಾಡಿದ್ದು, ಭಾರತೀಯ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ನಂತರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಈ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಐದನೇ ಆರೋಪಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular