ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಹಾಗೂ ತನಿಖೆಗೆ ಸಹಕರಿಸಲು ಸೂಚಿಸಿದೆ. ಪ್ರಕರಣದ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿದೆ.
ಸದ್ಯ, ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಪ್ರಮುಖ ಆರೋಪಿ ಜಗದೀಶ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದೆ.ಬಿಕ್ಲುಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿ ಜಗದೀಶ್ ಅಲಿಯಾಸ್ ಜಗ್ಗ ವಿದೇಶಗಳಲ್ಲಿ ತಲೆಮರೆಸಿಕೊಂಡಿದ್ದು, ಈಗಾಗಲೇ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿತ್ತು. ಆದಾಗ್ಯೂ ಆರೋಪಿ ಎಲ್ಲಿದ್ದಾನೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಈ ಹಿನ್ನೆಲೆಯಲ್ಲಿ ಸಿಐಡಿ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದೆ.
You Might Also Like
TAGGED:ಭೈರತಿ ಬಸವರಾಜ್