ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಆದೇಶವನ್ನ ಕೋರ್ಟ್ ಕಾಯ್ದಿರಿಸಿದೆ.
ವಾದ ವಿವಾದ ಆಲಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶವನ್ನ ಕಾಯ್ದಿರಿಸಿದೆ. ಇಂದು ಸಂಜೆಯೊಳಗೆ ಸಾಧ್ಯವಾದರೆ ಆದೇಶ ನೀಡುತ್ತೇನೆ ಎಂದು ಜಡ್ಜ್ ಹೇಳಿದ್ದಾರೆ.
ಬಂಧನ ಭೀತಿಯಲ್ಲಿರುವ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನಿಗಾಗಿ ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಷೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಾಲಯ, ಬಿಕ್ಲು ಶಿವ ಹತ್ಯೆ ಪ್ರಕರಣದ ಎ5 ಆಗಿರುವ ಭೈರತಿ ಬಸವರಾಜ್ ಗೆ ಲಿಂಕ್ ಆಗಿರುವ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದೆ. ಹೈಕೋರ್ಟ್ ಗೆ ನೀಡಿದ್ದ ಮಾಹಿತಿಯನ್ನು ಸಲ್ಲಿಸುವಂತೆ ಎಸ್ ಪಿಪಿಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಸೂಚಿಸಿದ್ದಾರೆ.ಬಳಿಕ ವಿಚಾರಣೆಯನ್ನು ಮಧ್ಯಾಹ್ನ 2:45ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದರು.

