BREAKING: ನಡುರಸ್ತೆಯಲ್ಲೇ ವ್ಯಕ್ತಿ ನಗ್ನಗೊಳಿಸಿದ ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ರಸ್ತೆಯಲ್ಲಿ ವ್ಯಕ್ತಿಯನ್ನು ನಗ್ನಗೊಳಿಸಿದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಸುಂಕದಕಟ್ಟೆ ಸಮೀಪ ರೌಡಿಶೀಟರ್ ಪವನ್ ಅಲಿಯಾಸ್ ಕಡುಬು ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ.

ವ್ಯಕ್ತಿಯನ್ನು ನಗ್ನಗೊಳಿಸಿ ರಸ್ತೆಯಲ್ಲಿ ಅಟ್ಟಾಡಿಸಿ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಕಿಡಿಗೇಡಿಗಳ ಬಂಧನಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಲೆ ಬೀಸಿದ್ದರು. ಕೃತ್ಯವೆಸಗಿದ್ದ ರೌಡಿಶೀಟರ್ ಪವನ್ ಅಲಿಯಾಸ್ ಕಡುಬು ಬಂಧಿಸಿ ಕರೆ ತರುವಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಆತನ ಕಾಲಿಗೆ ಫೈರಿಂಗ್ ಮಾಡಲಾಗಿದೆ.

ಬೆಂಗಳೂರಿನ ಜ್ಞಾನ ಭಾರತೀಯ ಉಳ್ಳಾಲ ಸಮೀಪ ಫೈರಿಂಗ್ ನಡೆಸಲಾಗಿದೆ. ಗೋವಿಂದರಾಜನಗರ ಇನ್ ಸ್ಪೆಕ್ಟರ್ ಸುಬ್ರಹ್ಮಣ್ಯ ಫೈರಿಂಗ್ ಮಾಡಿದ್ದಾರೆ. ಆತ್ಮ ರಕ್ಷಣೆಗಾಗಿ ಆರೋಪಿ ಮೇಲೆ ಗುಂಡು ಹಾರಿಸಿ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read