HomeKarnatakaBREAKING NEWS: ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

BREAKING NEWS: ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.

ರೌಡಿಶೀಟರ್ ಅಜಿತ್ (22) ಕೊಲೆಯಾದ ವ್ಯಕ್ತಿ. ಮಾರಕಾಸ್ತ್ರಗಳಿಂದ ಕೊಚ್ಚಿ ಅಜಿತ್ ನನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯ ರಶಿಲ್ಲಾರ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದೆ.

ಮಧ್ಯಾಹ್ನದ ಊಟ ಮುಗಿಸಿ ಮನೆಯಿಂದ ಹೊರ ಬರುತ್ತಿದ್ದ ಅಜಿತ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಘಟನಾ ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular