HomeKarnatakaಗುಂಡಿಕ್ಕಿ ರೌಡಿಶೀಟರ್ ಅಶೋಕ ಮಲ್ಲಪ್ಪ ಹತ್ಯೆ ಮಾಡಿದ್ದ ಇಬ್ಬರು ಅರೆಸ್ಟ್

ಗುಂಡಿಕ್ಕಿ ರೌಡಿಶೀಟರ್ ಅಶೋಕ ಮಲ್ಲಪ್ಪ ಹತ್ಯೆ ಮಾಡಿದ್ದ ಇಬ್ಬರು ಅರೆಸ್ಟ್

ವಿಜಯಪುರ: ರೌಡಿಶೀಟರ್ ಅಶೋಕ ಮಲ್ಲಪ್ಪ ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಕೊಲೆ ಸೇರಿದಂತೆ ಹಲವು ಕೇಸ್ ಗಳಲ್ಲಿ ಅಶೋಕ ಮಲ್ಲಪ್ಪ ಭಾಗಿಯಾಗಿದ್ದ ಅಶೋಕ ಪೆರೋಲ್ ಮೇಲೆ ಹೊರಗೆ ಬಂದಿದ್ದ.

ಅಶೋಕನನ್ನು ಜೂನ್ 16ರಂದು ಗುಂಡಿಟ್ಟು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಚಡಚಣ ನಿವಾಸಿಗಳಾದ ಇಸ್ಮಾಯಿಲ್ ಶೇಕ್ ಮತ್ತು ಜಾಫರ್ ಮಸಳೆ ಅವರನ್ನು ಬಂಧಿಸಲಾಗಿದೆ.

ಬಂಧಿತರಿಂದ ಒಂದು ನಾಡ ಪಿಸ್ತೂಲು, ಮೂರು ಸಜೀವ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಪಟ್ಟಣ ಪಂಚಾಯಿತಿ ಚುನಾವಣೆ, ಹಳೇ ದ್ವೇಷದ ಹಿನ್ನೆಲೆಯಲ್ಲಿ ಅಶೋಕ ಮಲ್ಲಪ್ಪನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದರು. ಅಶೋಕ ಮಲ್ಲಪ್ಪ ಕೊಲೆಯ ಪ್ರಕರಣದ ಇತರೆ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನೆಮನೆ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular