ಜೈಪುರ: ಭಾನುವಾರ ಜೈಪುರದ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025ರ 28ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಜಯಗಳಿಸಿದೆ.
ಆರ್.ಸಿ.ಬಿ. ನಾಯಕ ರಜತ್ ಪಾಟೀದಾರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ 20 ಓವರ್ ಗಳಲ್ಲಿ 4 ವಿಕೆಟ್ ಗೆ 173 ರನ್ ಗಳಿಸಿದೆ. ಯಶಸ್ವಿ ಜೈಸ್ವಾಲ್ 75, ಸಂಜು ಸ್ಯಾಮ್ಸನ್ 15, ರ್ಯಾನ್ ಪರಾಗ್ 30, ಧ್ರುವ ಜುರೇಲ್ ಅಜೇಯ 35 ರನ್ ಗಳಿಸಿದರು.
ಆರ್.ಸಿ.ಬಿ. ಪರವಾಗಿ ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹೇಜಲ್ ವುಡ್, ಕೃನಾಲ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು.
ಗೆಲುವಿನ ಗುರಿ ಬೆನ್ನತ್ತಿದ ಆರ್.ಸಿ.ಬಿ. ಪರವಾಗಿ ಪಿಲ್ ಸಾಲ್ಟ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ 65 ರನ್ ಗಳಿಸಿದರು. ವಿರಾಟ್ ಕೊಹ್ಲಿ ಅಜೇಯ 62, ದೇವದತ್ ಪಡಿಕ್ಕಲ್ ಅಜೇಯ 40 ರನ್ ಗಳಿಸಿದರು.
ಆರ್.ಆರ್. ಪರ ಕುಮಾರ್ ಕಾರ್ತಿಕೇಯ ಒಂದು ವಿಕೆಟ್ ಪಡೆದರು. ಆರ್.ಸಿ.ಬಿ 17.3 ಓವರ್ ಗಳಲ್ಲಿ 175 ರನ್ ಗಳಿಸಿ ಗೆಲುವಿನ ನಗೆ ಬೀರಿದೆ.