ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 11 ರನ್ ಗಳಿಂದ ರೋಚಕ ಗೆಲುವು ಸಾಧಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ನೀಡಿದ್ದ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿದೆ. ವಿರಾಟ್ ಕೊಹ್ಲಿ 70, ದೇವದುತ್ ಪಡಿಕಲ್ 50 ಅವರ ಬಿರುಸಿನ ಅರ್ಧಶತಕಗಳ ನೆರವಿನಿಂದ ಆರ್‌ಸಿಬಿ 20 ಓವರ್ ಗಳಲ್ಲಿ 205 ರನ್ ಗಳ ಬೃಹತ್ ಮೊತ್ತ ಗಳಿಸಿತು.
ಫಿಲ್ ಸಾಲಟ್ 26, ಟೀಮ್ ಡೇವಿಡ್ 23, ಜಿತೇಶ್ ಶರ್ಮ ಅಜೇಯ 20 ರನ್ ಗಳಿಸಿದರು. ರಾಜಸ್ಥಾನ ರಾಯಲ್ಸ್ ಪರವಾಗಿ ಸಂದೀಪ್ ಶರ್ಮ 2 ವಿಕೆಟ್ ಪಡೆದರು.
ಗೆಲುವಿನ ಗುರಿ ಬೆನ್ನತ್ತಿದ ರಾಜಸ್ಥಾನ 194 ರನ್ ಗಳಿಸಿತು. ಯಶಸ್ವಿ ಜೈಸ್ವಾಲ್ 49, ನಿತೇಶ್ ರಾಣಾ 28, ರ್ಯಾನ್ ಪರಾಗ್ 22, ಧೃವ 47 ರನ್ ಗಳಿಸಿದರು. ಆರ್‌ಸಿಬಿ ಪರವಾಗಿ ಜೋಶ್ ಹೇಜಲ್ ವುಡ್ 4, ಕೃನಾಲ್ ಪಾಂಡ್ಯ 2 ವಿಕೆಟ್ ಪಡೆದರು.