HomeKarnatakaBREAKING : ನಟ ದರ್ಶನ್ ಗೆ ರಾಜಾತಿಥ್ಯ : ಪರಪ್ಪನ ಅಗ್ರಹಾರಕ್ಕೆ DGP 'ಮಾಲಿನಿ ಕೃಷ್ಣಮೂರ್ತಿ'...

BREAKING : ನಟ ದರ್ಶನ್ ಗೆ ರಾಜಾತಿಥ್ಯ : ಪರಪ್ಪನ ಅಗ್ರಹಾರಕ್ಕೆ DGP ‘ಮಾಲಿನಿ ಕೃಷ್ಣಮೂರ್ತಿ’ ಭೇಟಿ, ಪರಿಶೀಲನೆ.!

BREAಬೆಂಗಳೂರು : ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ತೂಗುದೀಪ ಅವರು ಜೈಲಿನೊಳಗೆ ವಿಐಪಿ ಟ್ರೀಟ್ ಮೆಂಟ್ ಪಡೆಯುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ತನಿಖೆಗೆ ಸೂಚನೆ ನೀಡಿದ್ದರು.
ಇಂದು ಬೆಳಗ್ಗೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರೇ ಖುದ್ದಾಗಿ ಜೈಲಿಗೆ ಆಗಮಿಸಿದ ಅಲ್ಲಿನ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಗೆ ಜೈಲಿನಲ್ಲಿ ಸಿಗುತ್ತಿರುವ ವ್ಯವಸ್ಥೆಗಳ ಬಗ್ಗೆ ತನಿಖೆ ನಡೆಸುವಂತೆಯೂ ಸೂಚಿಸಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಜೈಲಿನ 7 ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ನಡುವೆ ನಟ ದರ್ಶನ್ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಗ್ಯಾಂಗ್ ನ್ನು ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡುವ ಬಗ್ಗೆ ಪೊಲೀಸ್ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular