ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರ ದಿನಕರ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ರಾಯಲ್’ ಚಿತ್ರ ಜನವರಿ 24ಕ್ಕೆ ತೆರೆ ಮೇಲೆ ಬರಲಿದ್ದು, ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಇದರ ಟ್ರೈಲರನ್ನು ಇದೇ ಜನವರಿ 16ರಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ.
ಈ ಚಿತ್ರವನ್ನು ಜಯಣ್ಣ ಫಿಲಂಸ್ ಬ್ಯಾನರ್ ನಲ್ಲಿ ಜಯಣ್ಣ ಭೋಗೇಂದ್ರ ನಿರ್ಮಾಣ ಮಾಡಿದ್ದು, ವಿರಾಟ್ ಹಾಗೂ ಸಂಜನಾ ಆನಂದ್, ಸೇರಿದಂತೆ ರಘು ಮುಖರ್ಜಿ, ಚಾಯಾ ಮುಖರ್ಜಿ, ಅಚ್ಯುತ್ ಕುಮಾರ್, ರಂಗಾಯಣ ರಘು, ಪ್ರಮೋದ್ ಶೆಟ್ಟಿ, ರವಿ ಭಟ್, ಗೋಪಾಲ್ ದೇಶಪಾಂಡೆ, ಅಭಿಲಾಷ್ ತೆರೆ ಹಂಚಿಕೊಂಡಿದ್ದಾರೆ. ಚರಣ್ ರಾಜ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, ರಘು ನಿಡುವಳ್ಳಿ ಸಂಭಾಷಣೆ, ಕೆ.ಎಂ.ಪ್ರಕಾಶ್ ಸಂಕಲನ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ಸಂಕೇತ್ ಎಂವೈಎಸ್ ಛಾಯಾಗ್ರಹಣವಿದೆ.