HomeIndia10ನೇ ತರಗತಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ 1,785 ಹುದ್ದೆಗಳಿಗೆ ಅರ್ಜಿ ಆಹ್ವಾನ

10ನೇ ತರಗತಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ 1,785 ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಟಿಐ ಪಾಸಾದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಆಗ್ನೇಯ ರೈಲ್ವೆಯ ರೈಲ್ವೆ ನೇಮಕಾತಿ ಮಂಡಳಿ 1,785 ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಿದೆ.

ತಾತ್ಕಾಲಿಕ ಹುದ್ದೆ ಇವಾಗಿದ್ದು, ಅರ್ಜಿ ಸಲ್ಲಿಸುವವರು ಶೇಕಡ 50ರಷ್ಟು ಅಂಕಗಳೊಂದಿಗೆ 10ನೇ ತರಗತಿ ಪಾಸ್ ಜೊತೆಗೆ ಐಟಿಐ ವಿದ್ಯಾರ್ಹತೆಯನ್ನು ಹುದ್ದೆಗಳಿಗೆ ಅನುಗುಣವಾಗಿ ಆಯಾ ಟ್ರೇಡ್ ನಲ್ಲಿ ಪಾಸ್ ಮಾಡಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನಿಷ್ಠ 15 ವರ್ಷ ಗರಿಷ್ಠ 24 ವರ್ಷ ವಯೋಮಿತಿ ಹೊಂದಿರಬೇಕು. ವರ್ಗವಾರು ವಯೋಮಿತಿ ಸಡಿಲಿಕೆ ಇರುತ್ತದೆ. ನವೆಂಬರ್ 29ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 28 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ವಿವರಗಳಿಗಾಗಿ www.rrcser.co.in ವೆಬ್ಸೈಟ್ ಗಮನಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular