ಕಲಬುರಗಿ: ಜ್ಞಾನಪೀಠ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ ಕನ್ನಡದ ಮಹನೀಯರ ಹುಟ್ಟೂರಿನ ಅಭಿವೃದ್ಧಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ತಲಾ ಒಂದು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುವೆಂಪು, ದ.ರಾ. ಬೇಂದ್ರೆ, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ವಿ.ಕೃ. ಗೋಕಾಕ್, ಯು.ಆರ್. ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ ಕಂಬಾರ್ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರಾದ ಸರ್ ಎಂ. ವಿಶ್ವೇಶ್ವರಯ್ಯ, ಭೀಮಸೇನ್ ಜೋಶಿ ಆವರ ಹುಟ್ಟೂರುಗಳ ಅಭಿವೃದ್ಧಿಗೆ ಅನುದಾನ ನೀಡಲಾಗುವುದು. ಸಿಎನ್ಆರ್ ರಾವ್ ಅವರ ಹುಟ್ಟೂರು ಬೆಂಗಳೂರು ಆಗಿದ್ದು, ನಗರ ಪ್ರದೇಶವಾಗಿದ್ದರಿಂದ ಐಟಿ ಬಿಟಿ ಇಲಾಖೆಯಿಂದ ಅನುದಾನ ನೀಡಲಾಗುವುದು. ಸ್ಥಳೀಯರ ಬೇಡಿಕೆ ಮೇರೆಗೆ ಎರಡು ಮೂರು ತಿಂಗಳಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
