HomeLatest NewsBREAKING: ಕೊಡವರ ಸಾಂಪ್ರದಾಯಿಕ ‘ಚೇನಂಡ ಹಾಕಿ ಪಂದ್ಯಾವಳಿ’ಗೆ 1 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ

BREAKING: ಕೊಡವರ ಸಾಂಪ್ರದಾಯಿಕ ‘ಚೇನಂಡ ಹಾಕಿ ಪಂದ್ಯಾವಳಿ’ಗೆ 1 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಾಂಪ್ರದಾಯಿಕ “ಚೇನಂಡ ಹಾಕಿ ಪಂದ್ಯಾವಳಿ”ಯ ಲೋಗೋವನ್ನು ಸಿಎಂ ಸಿದ್ಧರಾಮಯ್ಯ ಬಿಡುಗಡೆ ಮಾಡಿದರು.

ಅವರು ಮಾತನಾಡಿ, ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯನ್ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ. 2026ರ ಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವರಾದ ಎನ್.ಎಸ್. ಬೋಸರಾಜು, ಬೈರತಿ ಸುರೇಶ್ ಮತ್ತು ಶಿವರಾಜ್ ತಂಗಡಗಿ, ಶಾಸಕರು, ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಮತ್ತು ಶಾಸಕರಾದ ರಾಘವೇಂದ್ರ ಹಿಟ್ನಾಳ್ ಸೇರಿ ಕೊಡವ ಸಮುದಾಯದ ಅನೇಕ ಮುಖಂಡರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular