HomeLatest Newsಕಲ್ಯಾಣ ಕರ್ನಾಟಕ ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ ಕೋಟಿ ರೂ: ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕ ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ ಕೋಟಿ ರೂ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ನಮ್ಮ ಸರ್ಕಾರ ಇದುವರೆಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗಾಗಿ ವಿನಿಯೋಗಿಸಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಶಕ್ತಿ ಯೋಜನೆಯಡಿ 77.6 ಕೋಟಿ ಬಾರಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ 2,100 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಕಳೆದ 2 ವರ್ಷಗಳಲ್ಲಿ ಕೆಕೆಆರ್‌ಟಿಸಿಗೆ ಹೊಸದಾಗಿ 937 ಹೊಸ ಬಸ್‌ಗಳನ್ನು ಖರೀದಿಸಲಾಗಿದ್ದು, 1,873 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ.

ಗೃಹಜ್ಯೋತಿ ಯೋಜನೆಯಡಿ 21.42 ಲಕ್ಷ ಗ್ರಾಹಕರು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದು, ಇದಕ್ಕಾಗಿ 2,328 ಕೋಟಿ ರೂ ವಿನಿಯೋಗಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 24.78 ಲಕ್ಷ ಕುಟುಂಬಗಳ ಯಜಮಾನಿ ಮಹಿಳೆಯರಿಗೆ ತಲಾ 2,000 ರೂ.ಗಳಂತೆ ಒಟ್ಟು 9,650 ಕೋಟಿ ರೂ.ಗಳನ್ನು ವಿತರಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗಾಗಿ 3,200 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ವಿನಿಯೋಗಿಸಲಾಗಿದೆ. ಯುವನಿಧಿ ಯೋಜನೆಯಡಿ 5.75 ಲಕ್ಷ ನಿರುದ್ಯೋಗಿ ಯುವಕ-ಯುವತಿಯರಿಗೆ ಒಟ್ಟು 172 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular