ಬೆಂಗಳೂರು: ಭ್ರೂಣ ಹತ್ಯೆ ತಡೆ ಕಾನೂನಿನಡಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಭ್ರೂಣಲಿಂಗ ಪತ್ತೆಗೆ ಮುಂದಾದವರ ಬಗ್ಗೆ ಮಾಹಿತಿ ನೀಡಿದವರಿಗೆ ಕೊಡುವ ಬಹುಮಾನವನ್ನು 50 ಸಾವಿರದಿಂದ 1 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಆರೋಗ್ಯ ಇಲಾಖೆಯಿಂದ ಆರೋಗ್ಯಸೌಧದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೆಣ್ಣು ಭ್ರೂಣ ಹತ್ಯೆ ತಡೆಯುವಲ್ಲಿ ಆರೋಗ್ಯ ಇಲಾಖೆ ಗಮನಾರ್ಹ ಸಾಧನೆ ಮಾಡಿದೆ. ಪ್ರಸಕ್ತ ರಾಜ್ಯದಲ್ಲಿ 1000:947 ಪುರುಷ, ಸ್ತ್ರೀಯರ ಅನುಪಾತ ಇದೆ. ಇದನ್ನು ಸರಿಪಡಿಸಬೇಕಿದೆ. ಭ್ರೂಣಲಿಂಗ ಪತ್ತೆ ಕಾಯ್ದೆಗೆ ಸಂಬಂಧಿಸಿದಂತೆ ಯಶಸ್ವಿಯಾದ ಗುಪ್ತ ಕಾರ್ಯಾಚರಣೆಯಲ್ಲಿ ಮಾಹಿತಿ ನೀಡಿದವರಿಗೆ ಬಹುಮಾನ ನೀಡಲಾಗಿದೆ. ಭ್ರೂಣ ಹತ್ಯೆ ಹತ್ಯೆ ತಡೆಗೆ ಜನ ಸಹಕಾರ ನೀಡಬೇಕು ಎಂಬುದು ಹೇಳಿದ್ದಾರೆ.
ಆರೋಗ್ಯ ಇಲಾಖೆ ಆಯುಕ್ತ ಗುರುದತ್ತ ಹೆಗಡೆ, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಅವಿನಾಶ್ ಮೆನನ್ ರಾಜೇಂದ್ರ, ಇಲಾಖೆಯ ನಿರ್ದೇಶಕ ವಸಂತ್ ಕುಮಾರ್ ಕೆ. ಇತರರು ಇದ್ದರು.

