HomeKarnataka'ಭ್ರೂಣಹತ್ಯೆ' ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ : ಸಚಿವ ದಿನೇಶ್ ಗುಂಡೂರಾವ್...

‘ಭ್ರೂಣಹತ್ಯೆ’ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ.!

ಬೆಂಗಳೂರು : ಭ್ರೂಣಹತ್ಯೆ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ನೀಡಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆಯಂತಹ ಸಾಮಾಜಿಕ ಪಿಡುಗನ್ನು ಬೇರುಸಹಿತ ಕಿತ್ತೆಸೆಯಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ, ಅಕ್ರಮ ಭ್ರೂಣ ಹತ್ಯೆ ಕುರಿತು ಖಚಿತ ಮಾಹಿತಿ ನೀಡಿ, ಪ್ರಕರಣ ದಾಖಲಿಸಲು ಸಹಕರಿಸುವ ಸಾರ್ವಜನಿಕರಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಐವನ್ ಡಿಸೋಜಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಭ್ರೂಣ ಹತ್ಯೆ ಬಗ್ಗೆ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವವರಿಗೆ ನೀಡುತ್ತಿದ್ದ ಬಹುಮಾನದ ಮೊತ್ತವನ್ನು 50 ಸಾವಿರ ರೂ.ಗಳಿಂದ ₹1 ಲಕ್ಷಗಳಿಗೆ ಏರಿಕೆ ಮಾಡಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಭ್ರೂಣ ಹತ್ಯೆ ಸಂಬಂಧ 13 ಪ್ರಕರಣಗಳು ದಾಖಲಾಗಿದ್ದು, ಇದರ ಜೊತೆ ಕಳೆದ ಮೂರು ವರ್ಷಗಳಲ್ಲಿ ಕಾಯ್ದೆ ಉಲ್ಲಂಘಿಸಿರುವ ಸ್ಕ್ಯಾನಿಂಗ್ ಸೆಂಟರ್ಗಳ ಮಾಲೀಕರು/ ವೈದ್ಯರ ವಿರುದ್ಧ 150 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈ ಪೈಕಿ 80 ಪ್ರಕರಣಗಳಿಗೆ ದಂಡ ವಿಧಿಸಲಾಗಿದೆ. 70 ಪ್ರಕರಣಗಳು ನ್ಯಾಯಾಲಯದ ವಿವಿಧ ಹಂತದಲ್ಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular