HomeKarnatakaBIG NEWS: 10 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ, 2 ಲಕ್ಷ ಉದ್ಯೋಗ ಸೃಷ್ಟಿಗೆ...

BIG NEWS: 10 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ, 2 ಲಕ್ಷ ಉದ್ಯೋಗ ಸೃಷ್ಟಿಗೆ ಹೊಸ ಜವಳಿ ನೀತಿ ಜಾರಿ

ಬೆಳಗಾವಿ: 2024-26ರ ಅವಧಿಗೆ 10,000 ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ ಎರಡು ಲಕ್ಷ ಉದ್ಯೋಗ ಸೃಷ್ಟಿಯ ಗುರಿಯೊಂದಿಗೆ ಹೊಸ ಜವಳಿ ನೀತಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡಿದ ಅವರು, ಈ ನೂತನ ಜವಳಿ ನೀತಿ ಸಿದ್ಧಪಡಿಸಲು ಖಾಸಗಿ ಕಂಪನಿಯನ್ನು ನೇಮಕ ಮಾಡಲಾಗಿದ್ದು, ಜವಳಿ ನೀತಿಯ ಕರಡು ಸಿದ್ದಪಡಿಸಲು ಪೂರ್ವಭಾವಿ ಕ್ರಮ ಕೈಗೊಳ್ಳಲಾಗಿದೆ. ನೇಕಾರರು ಆರ್ಥಿಕ ಹೊರೆ ಮತ್ತು ಇತರೆ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಇಲಾಖೆಯಿಂದ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular