HomeKarnatakaBREAKING NEWS: ಧಾರವಾಡದಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಬೇಟೆ: ಒಂದೇ ಫ್ಲ್ಯಾಟ್ ನಲ್ಲಿ ಬರೋಬ್ಬರಿ 18...

BREAKING NEWS: ಧಾರವಾಡದಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಬೇಟೆ: ಒಂದೇ ಫ್ಲ್ಯಾಟ್ ನಲ್ಲಿ ಬರೋಬ್ಬರಿ 18 ಕೋಟಿ ರೂ. ಜಪ್ತಿ

ಧಾರವಾಡದ ದಾಸನಕೊಪ್ಪ ಕ್ರಾಸ್ ನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಒಂದೇ ಫ್ಲ್ಯಾಟ್ ನಲ್ಲಿ ಬರೋಬ್ಬರಿ 18 ಕೋಟಿ ರೂಪಾಯಿ ಜಪ್ತಿ ಮಾಡಿದ್ದಾರೆ.

ಬಸವರಾಜ ದತ್ತನವರ ಎಂಬುವರ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಸನಕೊಪ್ಪ ಕ್ರಾಸ್ ಬಳಿ ಇರುವ ಆರ್ನಾ ರೆಸಿಡೆನ್ಸಿಯಲ್ಲಿರುವ ಫ್ಲ್ಯಾಟ್ ಮೇಲೆ ಐಟಿ ತಂಡ ದಾಳಿ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫ್ಲಾಟ್ ನಂಬರ್ 303ರಲ್ಲಿ 18 ಕೋಟಿ ರೂಪಾಯಿಯನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಣ ಯಾರದ್ದು? ಹಣದ ಮೂಲ ಯಾವುದು ಎನ್ನುವುದರ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಸ್ಥಳೀಯ ಪೊಲೀಸರ ನೆರವಿನೊಂದಿಗೆ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular