ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಾಜರಾತಿಯನ್ನು ಆಧಾರಿತ (ಮುಖಚಹರೆ) ಮೊಬೈಲ್ ಅಪ್ಲಿಕೇಶನ್ ಮೂಲಕ ದಾಖಲಿಸುವ ನಿರಂತರ ಕಾರ್ಯಕ್ರಮ ಅನುಷ್ಠಾನಕ್ಕೆ ನಿಗದಿತ 2.83 ಕೋಟಿ ರೂ. ಅನುದಾನ ಬಿಡುಗಡೆಗೆ ಸರ್ಕಾರ ಅನುಮೋದನೆ ನೀಡಿದೆ.
ನಿರಂತರ ಕಾರ್ಯಕ್ರಮ ಅನುಷ್ಠಾನಕ್ಕಾಗಿ ತಂತ್ರಾಂಶದ ಉನ್ನತೀಕರಣ, ನವೀಕರಣಕ್ಕಾಗಿ ಓರಾಕಲ್ ಸಾಫ್ಟ್ವೇರ್ ಲೈಸೆನ್ಸ್ ಖರೀದಿಸಲು ಮತ್ತು ಯೋಜನೆ 10 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಜಾರಿಗೊಳಿಸುವ ಉದ್ದೇಶದಿಂದ ಅಪ್ ಗ್ರೇಡ್ ಮಾಡಲು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ನಡೆದ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ್ದು, ಅಂತೆಯೇ ನಿರಂತರ ಕಾರ್ಯಕ್ರಮ ಅನುಷ್ಠಾನಕ್ಕೆ 2.83 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.

